ಮತ್ತಾಯನು 21:30

ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ.

ಸಂದರ್ಭದೊಂದಿಗೆ ಓದಿ · ಮತ್ತಾಯನು 21

28ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.

29ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು.

30ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ.

31ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.

32ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.

ಮತ್ತಾಯನು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी