೧ ಯೋಹಾನನು 4:7

ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಯಾಕಂದರೆ ಪ್ರೀತಿಯು ದೇವರಿಂದಾಗಿದೆ. ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ.

ಸಂದರ್ಭದೊಂದಿಗೆ ಓದಿ · ೧ ಯೋಹಾನನು 4

5ಅವರು ಲೋಕಸಂಬಂಧಿಗಳಾಗಿದ್ದಾರೆ; ಈ ಕಾರಣ ದಿಂದ ಅವರು ಲೋಕಸಂಬಂಧವಾಗಿ ಮಾತನಾ ಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.

6ನಾವಂತೂ ದೇವರಿಗೆ ಸಂಬಂಧಪಟ್ಟವ ರಾಗಿದ್ದೇವೆ; ದೇವರನ್ನು ಬಲ್ಲವನು ನಮ್ಮ ಮಾತನ್ನು ಕೇಳುತ್ತಾನೆ; ದೇವರಿಗೆ ಸಂಬಂಧಪಡದವನು ನಮ್ಮ ಮಾತನ್ನು ಕೇಳುವದಿಲ್ಲ. ಇದು ಸತ್ಯದ ಆತ್ಮ, ಅದು ಸುಳ್ಳಿನ ಆತ್ಮ ಎಂದು ಇದರಿಂದಲೇ ನಾವು ತಿಳಿದು ಕೊಳ್ಳುತ್ತೇವೆ.

7ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಯಾಕಂದರೆ ಪ್ರೀತಿಯು ದೇವರಿಂದಾಗಿದೆ. ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ.

8ಪ್ರೀತಿಯಿಲ್ಲದ ವನು ದೇವರನ್ನು ಬಲ್ಲವನಲ್ಲ; ಯಾಕಂದರೆ ದೇವರು ಪ್ರೀತಿಯಾಗಿದ್ದಾನೆ.

9ನಾವು ಆತನ ಮೂಲಕ ಜೀವಿಸು ವದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮ ಕಡೆಗೆ ಪ್ರತ್ಯಕ್ಷವಾಗಿದೆ.

೧ ಯೋಹಾನನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी