ದಾನಿಯೇಲನು 9:9

ನಾವು ಆತನಿಗೆ ವಿರುದ್ಧ ವಾಗಿ ತಿರುಗಿಬಿದ್ದಿದ್ದರೂ ಕರ್ತನಾದ ನಮ್ಮ ದೇವರ ಕರುಣೆಯೂ ಮತ್ತು ಕ್ಷಮೆಯೂ ನಮಗಿದೆ.

ಸಂದರ್ಭದೊಂದಿಗೆ ಓದಿ · ದಾನಿಯೇಲನು 9

7ಓ ಕರ್ತನೇ, ನೀನು ನೀತಿವಂತನು; ಆದರೆ ನಾವು ಈ ದಿನದ ಪ್ರಕಾರ ನಾಚಿಕೆಗೀಡಾದವರು; ಯೆಹೂದದ ಮನುಷ್ಯರನ್ನೂ ಯೆರೂಸಲೇಮಿನ ನಿವಾ ಸಿಗಳನ್ನೂ ಸಮಸ್ತ ಇಸ್ರಾಯೇಲ್ಯರನ್ನೂ ಹತ್ತಿರದಲ್ಲಿ ರುವವರನ್ನೂ ಮತ್ತು ದೂರದಲ್ಲಿರುವವರನ್ನೂ ಅವರು ನಿನಗೆ ವಿರುದ್ಧವಾಗಿ ಮಾಡಿರುವ ಅವರ ಅಪರಾಧದ ನಿಮಿತ್ತ ನೀನು ಅವರನ್ನು ಎಲ್ಲಾ ದೇಶಗಳಲ್ಲಿಯೂ ಓಡಿಸಿ ಬಿಟ್ಟಿದ್ದೀ.

8ಓ ಕರ್ತನೇ, ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದರಿಂದ ನಮ್ಮ ಅರಸರಿಗೂ ಪ್ರಧಾ ನರಿಗೂ ಮತ್ತು ನಮ್ಮ ತಂದೆಗಳಿಗೂ ನಮಗೂ ನಾಚಿಕೆಯ ಮುಖಗಳಿವೆ.

9ನಾವು ಆತನಿಗೆ ವಿರುದ್ಧ ವಾಗಿ ತಿರುಗಿಬಿದ್ದಿದ್ದರೂ ಕರ್ತನಾದ ನಮ್ಮ ದೇವರ ಕರುಣೆಯೂ ಮತ್ತು ಕ್ಷಮೆಯೂ ನಮಗಿದೆ.

10ನಾವು ನಮ್ಮ ದೇವರಾದ ಕರ್ತನ ಸ್ವರಕ್ಕೆ ಕಿವಿಗೊಡದೆ ಆತನು ನಮ್ಮ ಮುಂದೆ ಇಟ್ಟ ಆತನ ಸೇವಕರಾದ ಪ್ರವಾದಿಗಳ ನ್ಯಾಯಪ್ರಮಾಣದಂತೆ ನಡೆಯಲಿಲ್ಲ.

11ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ.

ದಾನಿಯೇಲನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी