ಪ್ರಲಾಪಗಳು 1:20

ಓ ಕರ್ತನೇ, ನೋಡು; ನಾನು ಇಕ್ಕಟ್ಟಿನಲ್ಲಿದ್ದೇನೆ. ನನ್ನ ಕರುಳುಗಳು ನನ್ನ ಹೃದಯವು ಮಗಚಿಕೊಂಡಿದೆ. ನಾನು ಘೋರವಾಗಿ ತಿರುಗಿಬಿದ್ದಿದ್ದೇನೆ. ಹೊರಗೆ ಕತ್ತಿ ಯಿಂದ ಸಂಹಾರ, ಮನೆಯೊಳಗೆ ಮರಣ.

ಸಂದರ್ಭದೊಂದಿಗೆ ಓದಿ · ಪ್ರಲಾಪಗಳು 1

18ಕರ್ತನು ನೀತಿವಂತನು, ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿಬಿದ್ದಿದ್ದೇನೆ; ಎಲ್ಲಾ ಜನರೇ, ಕೇಳಿರಿ, ನಾನು ನಿಮ್ಮನ್ನು ಕೇಳಿ ಕೊಳ್ಳುತ್ತೇನೆ; ನನ್ನ ದುಃಖವನ್ನು ನೋಡಿರಿ, ನನ್ನ ಕನ್ಯೆಯರೂ ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.

19ನಾನು ನನ್ನ ಪ್ರಿಯರನ್ನು ಕರೆದೆನು, ಆದರೆ ಅವರು ನನ್ನನ್ನು ಮೋಸಗೊಳಿಸಿದರು; ನನ್ನ ಯಾಜಕರೂ ಹಿರಿ ಯರೂ ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ರೊಟ್ಟಿ ಯನ್ನು ಹುಡುಕುತ್ತಾ ನಗರದಲ್ಲಿ ಸತ್ತುಹೋದರು.

20ಓ ಕರ್ತನೇ, ನೋಡು; ನಾನು ಇಕ್ಕಟ್ಟಿನಲ್ಲಿದ್ದೇನೆ. ನನ್ನ ಕರುಳುಗಳು ನನ್ನ ಹೃದಯವು ಮಗಚಿಕೊಂಡಿದೆ. ನಾನು ಘೋರವಾಗಿ ತಿರುಗಿಬಿದ್ದಿದ್ದೇನೆ. ಹೊರಗೆ ಕತ್ತಿ ಯಿಂದ ಸಂಹಾರ, ಮನೆಯೊಳಗೆ ಮರಣ.

21ನಾನು ನಿಟ್ಟುಸಿರಿಡುವದನ್ನು ಅವರು ಕೇಳಿದರೂ ನನ್ನನ್ನು ಆದರಿ ಸಲು ಯಾರೂ ಅಲ್ಲಿರಲಿಲ್ಲ; ನನ್ನ ಶತ್ರುಗಳೆಲ್ಲಾ ನನ್ನ ಕಷ್ಟದ ವಿಷಯವನ್ನು ಕೇಳಿದರು; ನೀನು ಹಾಗೆ ಮಾಡಿದೆಯೆಂದು ಅವರು ಸಂತೋಷಪಟ್ಟರು. ನೀನು ತಿಳಿಸಿದ ಆ ದಿನವು ಬರಲು ಅವರು ನನ್ನ ಹಾಗೆಯೇ ಆಗುವರು.

22ಅವರ ಕೆಡುಕೆಲ್ಲಾ ನಿನ್ನ ಮುಂದೆ ಬರಲಿ; ನನ್ನ ಎಲ್ಲಾ ದ್ರೋಹಗಳ ನಿಮಿತ್ತ ನೀನು ನನಗೆ ಮಾಡಿದ ಪ್ರಕಾರವೇ ಅವರಿಗೆ ಮಾಡು; ನನ್ನ ನಿಟ್ಟು ಸಿರುಗಳು ಅನೇಕವಾಗಿವೆ; ನನ್ನ ಹೃದಯವು ಕುಂದಿದೆ.

ಪ್ರಲಾಪಗಳು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी