ಯೆರೆಮಿಯ 4:7

ಸಿಂಹವು ತನ್ನ ಅಡವಿಯೊಳಗಿಂದ ಏರಿ ಬರುತ್ತದೆ, ಅನ್ಯ ಜನಾಂಗ ಗಳನ್ನು ನಾಶಮಾಡುವವನು ಹೊರಟಿದ್ದಾನೆ, ನಿನ್ನ ದೇಶವನ್ನು ಹಾಳು ಮಾಡುವದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ; ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವದು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 4

5ಯೆಹೂದದಲ್ಲಿ ಪ್ರಚಾರಪಡಿಸಿರಿ, ಯೆರೂಸ ಲೇಮಿನಲ್ಲಿ ಪ್ರಕಟಿಸಿರಿ, ದೇಶದಲ್ಲಿ ತುತೂರಿ ಊದಿ ರೆಂದು ಹೇಳಿರಿ; ಗಟ್ಟಿಯಾಗಿ ಕೂಗಿರಿ; ಕೂಡಿಕೊಂಡು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ ಎಂದು ಹೇಳಿರಿ.

6ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ; ಹಿಂದಕ್ಕೆ ಹೋಗಿರಿ, ನಿಲ್ಲಬೇಡಿರಿ; ನಾನು ಉತ್ತರದಿಂದ ಕೇಡನ್ನೂ ದೊಡ್ಡ ನಾಶನವನ್ನೂ ತರುತ್ತೇನೆ.

7ಸಿಂಹವು ತನ್ನ ಅಡವಿಯೊಳಗಿಂದ ಏರಿ ಬರುತ್ತದೆ, ಅನ್ಯ ಜನಾಂಗ ಗಳನ್ನು ನಾಶಮಾಡುವವನು ಹೊರಟಿದ್ದಾನೆ, ನಿನ್ನ ದೇಶವನ್ನು ಹಾಳು ಮಾಡುವದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ; ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವದು.

8ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಗೋಳಾಡಿರಿ; ಕರ್ತನ ಕೋಪದ ಉರಿಯು ನಮ್ಮಿಂದ ಹಿಂತಿರುಗಲಿಲ್ಲ.

9ಆ ದಿವಸದಲ್ಲಿ ಆಗುವದೇನಂದರೆ--ಅರಸನ ಹೃದಯವೂ ಸಾಮಂ ತರ ಹೃದಯವೂ ಹಾಳಾಗುವದು. ಯಾಜಕರು ಆಶ್ಚರ್ಯಪಡುವರು; ಪ್ರವಾದಿಗಳು ಭ್ರಮೆಗೊಳ್ಳು ವರು ಎಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी