೧ ಅರಸುಗಳು 2:31

ಅರಸನು ಅವ ನಿಗೆ--ಅವನು ಹೇಳಿದ ಪ್ರಕಾರ ಮಾಡು; ನನ್ನಿಂದಲೂ ನನ್ನ ತಂದೆಯ ಮನೆಯಿಂದಲೂ ಯೋವಾಬನು ಚೆಲ್ಲಿದ ನಿರಪರಾಧ ರಕ್ತವನ್ನು ತೊಲಗಿಸುವ ಹಾಗೆ ಅವನ ಮೇಲೆ ಬಿದ್ದು ಅವನನ್ನು ಹೂಣಿಡು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 2

29ಯೋವಾ ಬನು ಕರ್ತನ ಮಂದಿರಕ್ಕೆ ಓಡಿಹೋಗಿ ಇಗೋ, ಬಲಿಪೀಠದ ಬಳಿಯಲ್ಲಿ ಇದ್ದಾನೆಂಬ ಮಾತು ಅರಸ ನಾದ ಸೊಲೊಮೋನನಿಗೆ ತಿಳಿಸಲ್ಪಟ್ಟಿತು. ಆಗ ಸೊಲೊ ಮೋನನು ಯೆಹೋಯಾದಾವನ ಮಗನಾದ ಬೆನಾ ಯನಿಗೆ--ನೀನು ಹೋಗಿ ಅವನ ಮೇಲೆ ಬೀಳು ಅಂದನು.

30ಬೆನಾಯನು ಕರ್ತನ ಮಂದಿರಕ್ಕೆ ಬಂದು ಅವನಿಗೆ--ನೀನು ಹೊರಗೆ ಬರಬೇಕೆಂದು ಅರಸನು ಹೇಳುತ್ತಾನೆ ಅಂದನು. ಅದಕ್ಕವನು--ಇಲ್ಲ, ಇಲ್ಲಿಯೇ ಸಾಯುತ್ತೇನೆ ಅಂದನು. ಬೆನಾಯನು ಅರಸನ ಬಳಿಗೆ ತಿರಿಗಿ ಹೋಗಿ ಯೋವಾಬನು ಹೀಗೆ ಹೇಳಿ ನನಗೆ ಪ್ರತ್ಯುತ್ತರಕೊಟ್ಟನು ಅಂದನು.

31ಅರಸನು ಅವ ನಿಗೆ--ಅವನು ಹೇಳಿದ ಪ್ರಕಾರ ಮಾಡು; ನನ್ನಿಂದಲೂ ನನ್ನ ತಂದೆಯ ಮನೆಯಿಂದಲೂ ಯೋವಾಬನು ಚೆಲ್ಲಿದ ನಿರಪರಾಧ ರಕ್ತವನ್ನು ತೊಲಗಿಸುವ ಹಾಗೆ ಅವನ ಮೇಲೆ ಬಿದ್ದು ಅವನನ್ನು ಹೂಣಿಡು.

32ಆಗ ಕರ್ತನು ಅವನ ತಲೆಯ ಮೇಲೆ ಅವನ ರಕ್ತಾಪರಾಧ ವನ್ನು ಬರಮಾಡುವನು. ನನ್ನ ತಂದೆಯಾದ ದಾವೀ ದನು ತಿಳಿಯದಿರುವಾಗ ಅವನು ತನಗಿಂತ ನೀತಿಯುಳ್ಳ ಉತ್ತಮರಾದ ಇಬ್ಬರ ಮೇಲೆ ಬಿದ್ದು ಅವರನ್ನು ಕತ್ತಿ ಯಿಂದ ಕೊಂದನು. ಅವರು ಯಾರಂದರೆ, ಇಸ್ರಾ ಯೇಲಿನ ಸೈನ್ಯಕ್ಕೆ ಅಧಿಪತಿಯಾಗಿದ್ದ ನೇರನ ಮಗನಾದ ಅಬ್ನೇರನೂ ಯೆಹೂದ ಸೈನ್ಯಕ್ಕೆ ಅಧಿಪತಿಯಾಗಿದ್ದ ಯೆತೆರನ ಮಗನಾದ ಅಮಾಸನೂ.

33ಆದದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆ ಯೂ ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವದು. ಆದರೆ ದಾವೀದನ ಮೇಲೆಯೂ ಅವನ ಸಂತಾನದವರ ಮೇಲೆಯೂ ಮನೆಯ ಮೇಲೆಯೂ ಸಿಂಹಾಸನದ ಮೇಲೆಯೂ ಕರ್ತನಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವದು ಅಂದನು.

೧ ಅರಸುಗಳು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी