೧ ಅರಸುಗಳು 20:9

ನೀವು ಅರಸನಾದ ನನ್ನ ಒಡೆಯನಿಗೆ ಹೇಳಬೇಕಾದದ್ದೇನಂದರೆ, ನೀನು ಮೊದಲು ಹೇಳಿದ ಸಮಸ್ತವನ್ನೂ ಮಾಡುವೆನು; ಆದರೆ ಈ ಕಾರ್ಯವನ್ನು ನಾನು ಮಾಡಕೂಡದು ಎಂದು ಹೇಳಿರಿ ಅಂದನು. ದೂತರು ಹೋಗಿ ಈ ಮಾತನ್ನು ಅವನಿಗೆ ಹೇಳಿದರು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 20

7ಆಗ ಇಸ್ರಾಯೇಲಿನ ಅರಸನು ದೇಶದ ಹಿರಿಯರನ್ನೆಲ್ಲಾ ಕರೆಯಿಸಿ ಅವರಿಗೆಇವನು ಕೇಡನ್ನು ಹುಡುಕುತ್ತಾನೆಂದು ದಯಮಾಡಿ ತಿಳುಕೊಂಡು ನೋಡಿರಿ. ಯಾಕಂದರೆ ಅವನು ನನ್ನ ಹೆಂಡತಿಯರಿಗೋಸ್ಕರ ಮಕ್ಕಳಿಗೋಸ್ಕರವೂ ಬೆಳ್ಳಿಗೋ ಸ್ಕರವೂ ನನ್ನ ಬಂಗಾರಕ್ಕೋಸ್ಕರವೂ ನನ್ನ ಬಳಿಗೆ ಕಳುಹಿಸಿದಾಗ ನಾನು ಕೊಡುವದಿಲ್ಲವೆಂದು ಅವನಿಗೆ ಹೇಳಿದ್ದಿಲ್ಲ ಅಂದನು.

8ಆಗ ಹಿರಿಯರೂ ಜನರೂ ಅವನಿಗೆ--ಅವನ ಮಾತು ಕೇಳದೆ ಒಪ್ಪದೆ ಇರು ಅಂದರು.? ಆದದರಿಂದ ಅವನು ಬೆನ್ಹದದನ ದೂತ ರಿಗೆ--

9ನೀವು ಅರಸನಾದ ನನ್ನ ಒಡೆಯನಿಗೆ ಹೇಳಬೇಕಾದದ್ದೇನಂದರೆ, ನೀನು ಮೊದಲು ಹೇಳಿದ ಸಮಸ್ತವನ್ನೂ ಮಾಡುವೆನು; ಆದರೆ ಈ ಕಾರ್ಯವನ್ನು ನಾನು ಮಾಡಕೂಡದು ಎಂದು ಹೇಳಿರಿ ಅಂದನು. ದೂತರು ಹೋಗಿ ಈ ಮಾತನ್ನು ಅವನಿಗೆ ಹೇಳಿದರು.

10ಆಗ ಬೆನ್ಹದದನು ಕಳುಹಿಸಿ--ನನ್ನನ್ನು ಹಿಂಬಾಲಿಸುವ ಸಮಸ್ತ ಜನರು ಕೈತುಂಬ ತಕ್ಕೊಳ್ಳಲು ಸಮಾರ್ಯದ ಧೂಳು ಸಾಕಾದರೆ ದೇವರುಗಳು ನನಗೆ ಹೀಗೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ ಎಂದು ಅವನಿಗೆ ಹೇಳಿ ಕಳುಹಿಸಿದನು.

11ಅದಕ್ಕೆ ಇಸ್ರಾಯೇಲಿನ ಅರಸನು ಪ್ರತ್ತ್ಯುತ್ತರವಾಗಿ--ನಡುಕಟ್ಟಿಕೊಳ್ಳುವವನು ಬಿಚ್ಚಿ ಹಾಕುವವನ ಹಾಗೆ ಹೊಗಳಿಕೊಳ್ಳದಿರಲಿ ಎಂದು ಹೇಳು ಅಂದನು.

೧ ಅರಸುಗಳು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी