ಜೆಕರ್ಯ 9:12

ನಿರೀಕ್ಷೆಯ ಸೆರೆಯವರೇ, ಬಲವಾದ ದುರ್ಗಸ್ಥಾನಕ್ಕೆ ತಿರಿಗಿರಿ, ಎರಡ ರಷ್ಟು ನಿಮಗೆ ಕೊಡುವೆನೆಂದು ಈ ಹೊತ್ತೇ ಪ್ರಕಟಿ ಸುತ್ತೇನೆ.

ಸಂದರ್ಭದೊಂದಿಗೆ ಓದಿ · ಜೆಕರ್ಯ 9

10ಇದಲ್ಲದೆ ಎಫ್ರಾಯಾಮಿನೊಳಗಿಂದ ರಥ ಗಳನ್ನೂ ಯೆರೂಸಲೇಮಿನೊಳಗಿಂದ ಕುದುರೆಗಳನ್ನೂ ತೆಗೆದುಬಿಡುವೆನು; ಯುದ್ಧದ ಬಿಲ್ಲು ಸಹ ತೆಗೆದು ಹಾಕಲ್ಪಡುವದು; ಆತನು ಅನ್ಯ ಜನಾಂಗಗಳಿಗೆ ಸಮಾ ಧಾನವನ್ನು ಹೇಳುವನು; ಆತನ ದೊರೆತನವು ಸಮುದ್ರ ದಿಂದ ಸಮುದ್ರಕ್ಕೂ ನದಿಯಿಂದ ಭೂಮಿಯ ಅಂತ್ಯಗಳ ವರೆಗೂ ಇರುವದು.

11ನಿನ್ನ ವಿಷಯವಾಗಿ ಸಹ ನಿನ್ನ ಒಡಂಬಡಿಕೆಯ ರಕ್ತದಿಂದ, ನಿನ್ನ ಸೆರೆಯವರನ್ನು ನೀರಿಲ್ಲದ ಕುಣಿಯೊ ಳಗಿಂದ ಕಳುಹಿಸಿಬಿಡುತ್ತೇನೆ.

12ನಿರೀಕ್ಷೆಯ ಸೆರೆಯವರೇ, ಬಲವಾದ ದುರ್ಗಸ್ಥಾನಕ್ಕೆ ತಿರಿಗಿರಿ, ಎರಡ ರಷ್ಟು ನಿಮಗೆ ಕೊಡುವೆನೆಂದು ಈ ಹೊತ್ತೇ ಪ್ರಕಟಿ ಸುತ್ತೇನೆ.

13ಯೆಹೂದವನ್ನು ನನಗಾಗಿ ಬೊಗ್ಗಿಸಿದಾಗ ಎಫ್ರಾಯಾಮನ್ನು ಬಿಲ್ಲುಗಳಿಂದ ತುಂಬಿಸಿದ್ದೇನೆ; ಚೀಯೋನೇ, ನಿನ್ನ ಕುಮಾರರನ್ನು ಗ್ರೀಕ್‌ ಕುಮಾರರಿಗೆ ವಿರೋಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯಂತೆ ಮಾಡಿದ್ದೇನೆ.

14ಇದಲ್ಲದೆ ಕರ್ತನು ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣಗಳು ಮಿಂಚಿನ ಹಾಗೆ ಹೊರಡುವವು; ಕರ್ತನಾದ ದೇವರು ತುತೂರಿ ಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗು ವನು.

ಜೆಕರ್ಯ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी