ಯೆಶಾಯ 48:12

ಓ ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು; ಆತನು--ನಾನೇ; ನಾನೇ ಮೊದಲನೆಯವನು, ನಾನೇ ಕಡೆಯವನು.

ಸಂದರ್ಭದೊಂದಿಗೆ ಓದಿ · ಯೆಶಾಯ 48

10ಇಗೋ, ನಾನು ನಿನ್ನನ್ನು ಶೋಧಿಸಿದ್ದೇನೆ; ಆದರೆ ಬೆಳ್ಳಿಯಂತೆ ಅಲ್ಲ; ಸಂಕಟದ ಕುಲುಮೆಯಿಂದ ನಿನ್ನನ್ನು ಆದು ಕೊಂಡಿದ್ದೇನೆ.

11ನನಗಾಗಿಯೇ, ನನಗೋಸ್ಕರವೇ, ಇದನ್ನು ಮಾಡುವೆನು; ನನ್ನ ಹೆಸರು ಯಾಕೆ ಅಪವಿತ್ರ ವಾಗುವದು? ನನ್ನ ಮಹಿಮೆಯನ್ನು ನಾನು ಮತ್ತೊ ಬ್ಬನಿಗೆ ಸಲ್ಲಗೊಡಿಸೆನು.

12ಓ ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು; ಆತನು--ನಾನೇ; ನಾನೇ ಮೊದಲನೆಯವನು, ನಾನೇ ಕಡೆಯವನು.

13ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು; ನನ್ನ ಬಲಗೈ ಆಕಾಶವನ್ನು ಹರಡಿತು; ನಾನು ಅವುಗಳನ್ನು ಕರೆಯಲು ಅವು ಒಟ್ಟಾಗಿ ನಿಂತುಕೊಂಡವು.

14ನೀವೆಲ್ಲರೂ ಕೂಡಿಕೊಂಡು ಕೇಳಿರಿ. ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವರು ಯಾರು? ಕರ್ತನು ಅವನನ್ನು ಪ್ರೀತಿಮಾಡಿದ್ದಾನೆ. ಆತನು ಬಾಬೆಲಿನಲ್ಲಿ ಅವನ ಇಷ್ಟವನ್ನು ನೆರವೇರಿಸುವನು; ಆತನ ಹಸ್ತವು ಕಸ್ದೀಯರ ಮೇಲಿರುವದು.

ಯೆಶಾಯ 48 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी