೧ ಸಮುವೇಲನು 19:3

ಆಗ ನಾನು ಹೊರಟು ಬಂದು ನೀನು ಇರುವ ಹೊಲದಲ್ಲಿ ನನ್ನ ತಂದೆಯ ಬಳಿಯಲ್ಲಿ ನಿಂತುಕೊಂಡು ನಿನಗೋಸ್ಕರ ನನ್ನ ತಂದೆಯ ಸಂಗಡ ಮಾತನಾಡಿದ್ದನ್ನು ನಿನಗೆ ತಿಳಿಸುವೆನು ಅಂದನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 19

1ಸೌಲನು ದಾವೀದನನ್ನು ಕೊಂದುಹಾಕುವ ಹಾಗೆ ತನ್ನ ಮಗನಾದ ಯೋನಾತಾನನ ಸಂಗಡವೂ ತನ್ನ ಸಮಸ್ತ ಸೇವಕರ ಸಂಗಡವೂ ಮಾತನಾಡಿದನು.

2ಆದರೆ ಸೌಲನ ಮಗನಾದ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿ ಸುತ್ತಿದ್ದನು; ಯೋನಾತಾನನು ದಾವೀದನಿಗೆ--ನನ್ನ ತಂದೆಯಾದ ಸೌಲನು ನಿನ್ನನ್ನು ಕೊಲ್ಲಬೇಕೆಂದು ಹುಡುಕುತ್ತಾನೆ; ನೀನು ನಾಳೆ ಬೆಳಗಿನವರೆಗೆ ಎಚ್ಚರಿಕೆ ಯಾಗಿದ್ದು ಮರೆಯಾದ ಸ್ಥಳಗಳಲ್ಲಿ ಅಡಗಿಕೋ.

3ಆಗ ನಾನು ಹೊರಟು ಬಂದು ನೀನು ಇರುವ ಹೊಲದಲ್ಲಿ ನನ್ನ ತಂದೆಯ ಬಳಿಯಲ್ಲಿ ನಿಂತುಕೊಂಡು ನಿನಗೋಸ್ಕರ ನನ್ನ ತಂದೆಯ ಸಂಗಡ ಮಾತನಾಡಿದ್ದನ್ನು ನಿನಗೆ ತಿಳಿಸುವೆನು ಅಂದನು.

4ಹಾಗೆಯೇ ಯೋನಾತಾನನು ತನ್ನ ತಂದೆಯಾದ ಸೌಲನ ಸಂಗಡ ದಾವೀದನನ್ನು ಕುರಿತು ಒಳ್ಳೇದನ್ನು ಮಾತನಾಡಿ ಅವನಿಗೆ--ಅರಸನು ತನ್ನ ಸೇವಕನಾದ ದಾವೀದನಿಗೆ ವಿರೋಧವಾಗಿ ಪಾಪಮಾಡದೆ ಇರಲಿ, ಅವನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ; ಅವನ ಕ್ರಿಯೆಗಳು ನಿನಗೆ ಬಹಳ ಉತ್ತಮವಾಗಿವೆ;

5ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡುಕೊಂಡು ಫಿಲಿಷ್ಟಿಯನನ್ನು ಕೊಂದನು. ಕರ್ತನು ಎಲ್ಲಾ ಇಸ್ರಾಯೇಲಿಗೋಸ್ಕರ ದೊಡ್ಡ ರಕ್ಷಣೆ ಯನ್ನುಂಟು ಮಾಡಿದನು. ನೀನೂ ನೋಡಿ ಸಂತೋಷ ಪಟ್ಟೆ; ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರಪರಾಧಿಯ ರಕ್ತಕ್ಕೆ ವಿರೋಧವಾಗಿ ಪಾಪವನ್ನು ಮಾಡುವದು ಯಾಕೆ ಅಂದನು.

೧ ಸಮುವೇಲನು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी