ಯೋಹಾನನು 14:22

ಯೂದನು (ಇಸ್ಕರಿಯೋತನಲ್ಲ)--ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಕಾಣಿಸಿ ಕೊಳ್ಳುವದು ಹೇಗೆ ಎಂದು ಆತನನ್ನು ಕೇಳಿದನು.

ಸಂದರ್ಭದೊಂದಿಗೆ ಓದಿ · ಯೋಹಾನನು 14

20ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮ ಲ್ಲಿಯೂ ಇರುವೆನೆಂದು ನೀವು ಆ ದಿನದಲ್ಲಿ ತಿಳಿದು ಕೊಳ್ಳುವಿರಿ.

21ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು.

22ಯೂದನು (ಇಸ್ಕರಿಯೋತನಲ್ಲ)--ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಕಾಣಿಸಿ ಕೊಳ್ಳುವದು ಹೇಗೆ ಎಂದು ಆತನನ್ನು ಕೇಳಿದನು.

23ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು.

24ನನ್ನನ್ನು ಪ್ರೀತಿಸದವನು ನನ್ನ ಮಾತು ಗಳನ್ನು ಕೈಕೊಳ್ಳುವದಿಲ್ಲ; ನೀವು ಕೇಳಿದ ಮಾತು ನನ್ನದಲ್ಲ; ಆದರೆ ನನ್ನನ್ನು ಕಳುಹಿಸಿದ ನನ್ನ ತಂದೆಯ ಮಾತೇ.

ಯೋಹಾನನು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी