ನೀನು ಇನ್ನೂ ಅವರನ್ನು ಕಳುಹಿಸದೆ ನನ್ನ ಜನರಿಗೆ ವಿರೋಧ ವಾಗಿ ನಿನ್ನನ್ನು ನೀನೇ ಹೆಚ್ಚಿಸಿಕೊಳ್ಳುತ್ತೀಯೋ?
15ಈಗ ನನ್ನ ಕೈಚಾಚಿ ನಿನ್ನನ್ನೂ ನಿನ್ನ ಜನರನ್ನೂ ವ್ಯಾಧಿಯಿಂದ ಹೊಡೆಯುವೆನು; ನಿನ್ನನ್ನೂ ಭೂಮಿ ಯೊಳಗಿಂದ ನಿರ್ಮೂಲ ಮಾಡುವೆನು.
16ಆದರೆ ನಿಶ್ಚಯವಾಗಿ ನನ್ನ ಬಲವನ್ನು ನಿನಗೆ ತೋರಿಸುವ ಹಾಗೆಯೂ ನನ್ನ ಹೆಸರು ಭೂಲೋಕದಲ್ಲೆಲ್ಲಾ ತಿಳಿಸಲ್ಪಡುವಂತೆಯೂ ನಿನ್ನನ್ನು ಎಬ್ಬಿಸಿದ್ದೇನೆ.
17ನೀನು ಇನ್ನೂ ಅವರನ್ನು ಕಳುಹಿಸದೆ ನನ್ನ ಜನರಿಗೆ ವಿರೋಧ ವಾಗಿ ನಿನ್ನನ್ನು ನೀನೇ ಹೆಚ್ಚಿಸಿಕೊಳ್ಳುತ್ತೀಯೋ?
18ಇಗೋ, ನಾಳೆ ಇಷ್ಟು ಹೊತ್ತಿಗೆ ಮಹಾಕಠಿಣವಾದ ಆನೆಕಲ್ಲಿನ ಮಳೆಯನ್ನು ಬೀಳಮಾಡುತ್ತೇನೆ. ಇಂಥದ್ದು ಐಗುಪ್ತದಲ್ಲಿ ಅದಕ್ಕೆ ಅಸ್ತಿವಾರ ಹಾಕಿದಂದಿನಿಂದ ಇಲ್ಲಿಯವರೆಗೂ ಆಗಿರಲಿಲ್ಲ.
19ಹೀಗಿರುವದರಿಂದ (ಯಾವನನ್ನಾದರೂ) ಕಳುಹಿಸಿ ನಿನ್ನ ಪಶುಗಳನ್ನೂ ಹೊಲದಲ್ಲಿ ನಿನಗಿರುವವುಗಳನ್ನೂ ಕೂಡಿಸು. ಯಾಕಂ ದರೆ ಮನೆಗಳಿಗೆ ತಾರದೆ ಹೊಲದಲ್ಲಿ ಸಿಕ್ಕುವ ಮನುಷ್ಯರ ಮೇಲೂ ಪಶುಗಳಮೇಲೂ ಆನೆಕಲ್ಲಿನ ಮಳೆಯು ಸುರಿದು ಕೊಲ್ಲುವದು ಎಂದು ಹೇಳು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ