ಯೆಶಾಯ 40:9

ಶುಭಸಮಾಚಾರವನ್ನು ತಿಳಿಸುವ ಓ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಶುಭಸಮಾ ಚಾರವನ್ನು ತಿಳಿಸುವ ಓ ಯೆರೂಸಲೇಮೇ, ಬಲವಾಗಿ ನಿನ್ನ ಸ್ವರವನ್ನು ಎತ್ತು, ಭಯಪಡದೆ ಎತ್ತು; ಯೆಹೂದದ ಪಟ್ಟಣಗಳಿಗೆ ಇಗೋ, ನಿನ್ನ ದೇವರು ಎಂದು ಹೇಳು.

ಸಂದರ್ಭದೊಂದಿಗೆ ಓದಿ · ಯೆಶಾಯ 40

7ಹುಲ್ಲು ಒಣಗಿ ಹೋಗು ವದು ಹೂವು ಬಾಡಿಹೋಗುವದು. ಕರ್ತನ ಆತ್ಮ ಅವುಗಳ ಮೇಲೆ ಊದುವನು; ನಿಶ್ಚಯವಾಗಿ ಜನರು ಹುಲ್ಲೇ.

8ಹುಲ್ಲು ಒಣಗಿಹೋಗುವದು ಹೂವು ಬಾಡಿಹೋಗುವದು. ಆದರೆ ನಮ್ಮ ದೇವರ ವಾಕ್ಯವು ಸದಾಕಾಲ ನಿಲ್ಲುವದು ಎಂದು ಉತ್ತರವಾಯಿತು.

9ಶುಭಸಮಾಚಾರವನ್ನು ತಿಳಿಸುವ ಓ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಶುಭಸಮಾ ಚಾರವನ್ನು ತಿಳಿಸುವ ಓ ಯೆರೂಸಲೇಮೇ, ಬಲವಾಗಿ ನಿನ್ನ ಸ್ವರವನ್ನು ಎತ್ತು, ಭಯಪಡದೆ ಎತ್ತು; ಯೆಹೂದದ ಪಟ್ಟಣಗಳಿಗೆ ಇಗೋ, ನಿನ್ನ ದೇವರು ಎಂದು ಹೇಳು.

10ಇಗೋ, ಕರ್ತನಾದ ದೇವರು ಬಲವುಳ್ಳ ಕೈಯಿಂದ ಬರುತ್ತಾನೆ, ಆತನ ತೋಳು ತನಗೋಸ್ಕರ ಆಳುವದು. ಇಗೋ, ಆತನ ಬಹುಮಾನವು ಆತನ ಸಂಗಡಲೂ ಆತನ ಪ್ರತಿಫಲವು ಆತನ ಮುಂದೆಯೂ ಇದೆ.

11ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.

ಯೆಶಾಯ 40 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी