ಆಗ ಅವರು ಅವನ ಬಳಿಗೆ ಬಂದು--ನಾವು ಇಲ್ಲಿ ನಮ್ಮ ಪಶುಗಳಿಗೋಸ್ಕರ ಹಟ್ಟಿಗಳನ್ನೂ ನಮ್ಮ ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟುವೆವು.
14ಇಗೋ, ಕರ್ತನ ಕೋಪವು ಇಸ್ರಾಯೇಲ್ ಕಡೆಗೆ ಇನ್ನೂ ಹೆಚ್ಚಾಗುವ ಹಾಗೆ ನೀವು ನಿಮ್ಮ ಪಿತೃಗಳಿಗೆ ಬದಲಾಗಿ ಪಾಪಿಗಳಾದ ಮನುಷ್ಯರ ಅಭಿವೃದ್ಧಿಯಾಗಿ ನಿಂತಿದ್ದೀರಿ.
15ನೀವು ಆತನ ಕಡೆಯಿಂದ ತಿರುಗಿದರೆ ಆತನು ಇನ್ನೂ ಹೆಚ್ಚಾಗಿ ಅವರನ್ನು ಅರಣ್ಯದಲ್ಲಿ ಇರಿಸಿ ಬಿಡುವನು; ನೀವು ಈ ಸಮಸ್ತ ಜನರನ್ನು ನಾಶಮಾಡುವಿರಿ ಎಂದು ಹೇಳಿದನು.
16ಆಗ ಅವರು ಅವನ ಬಳಿಗೆ ಬಂದು--ನಾವು ಇಲ್ಲಿ ನಮ್ಮ ಪಶುಗಳಿಗೋಸ್ಕರ ಹಟ್ಟಿಗಳನ್ನೂ ನಮ್ಮ ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟುವೆವು.
17ಆದರೆ ನಾವು ಇಸ್ರಾಯೇಲ್ ಮಕ್ಕಳ ಮುಂದೆ ಅವರನ್ನು ಅವರ ಸ್ಥಳದೊಳಗೆ ಸೇರಿಸುವ ವರೆಗೆ ಯುದ್ಧಕ್ಕೆ ಸಿದ್ಧ ವಾಗಿ ಓಡುವೆವು; ನಮ್ಮ ಮಕ್ಕಳು ಮಾತ್ರ ಈ ದೇಶದ ನಿವಾಸಿಗಳ ದೆಸೆಯಿಂದ ಭದ್ರವಾದ ಊರುಗಳಲ್ಲಿ ವಾಸವಾಗಿರಬೇಕು.
18ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬೊಬ್ಬನು ತನ್ನ ಸ್ವಾಸ್ತ್ಯವನ್ನು ಹೊಂದಿಕೊಳ್ಳುವ ವರೆಗೆ ನಾವು ನಮ್ಮ ಮನೆಗಳಿಗೆ ತಿರುಗುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ