ನಮ್ಮ ವಿಮೋಚಕನಿಗಾದರೋ, ಸೈನ್ಯಗಳ ಕರ್ತನು ಎಂಬದೇ ಆತನ ಹೆಸರು, ಆತನೇ ಇಸ್ರಾಯೇಲಿನ ಪರಿಶುದ್ಧನು.
2ಬೀಸುವ ಕಲ್ಲನ್ನು ಹಿಡಿದು ಹಿಟ್ಟನ್ನು ಬೀಸು, ಮುಸುಕನ್ನು ತೆಗೆದುಹಾಕಿ ನಿನ್ನ ಕಾಲನ್ನು ಬರಿದುಮಾಡಿ, ತೊಡೆಯನ್ನು ಮುಚ್ಚದೆ ನದಿಗಳನ್ನು ಹಾದುಹೋಗು.
3ನಿನ್ನ ಬೆತ್ತಲೆತನವು ಮುಚ್ಚಲ್ಪಡದೇ ಇದ್ದದರಿಂದ ನೀನು ನಾಚಿಕೆಗೆ ಈಡಾಗುವಿ, ನಾನು ನಿನ್ನನ್ನು ಮನುಷ್ಯನಂತೆ ಸಂದಿಸದೆ ನಿನಗೆ ಮುಯ್ಯಿ ತೀರಿಸುವೆನು.
4ನಮ್ಮ ವಿಮೋಚಕನಿಗಾದರೋ, ಸೈನ್ಯಗಳ ಕರ್ತನು ಎಂಬದೇ ಆತನ ಹೆಸರು, ಆತನೇ ಇಸ್ರಾಯೇಲಿನ ಪರಿಶುದ್ಧನು.
5ಓ ಕಸ್ದೀಯರ ಕುಮಾರಿಯೇ, ಮೌನ ವಾಗಿ ಕುಳಿತುಕೋ, ಕತ್ತಲೊಳಗೆ ಹೋಗು; ಯಾಕಂ ದರೆ ಇನ್ನು ಮೇಲೆ ನೀನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವದಿಲ್ಲ.
6ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವಾಸ್ಥ್ಯವನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು; ನೀನು ಅವರಿಗೆ ಕರುಣೆಯನ್ನು ತೋರಿಸದೆ ಮುದುಕರ ಮೇಲೆಯೂ ಬಹು ಭಾರವಾದ ನೊಗವನ್ನು ಹೊರಿ ಸಿದಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ