ಮಾರ್ಕನು 5:33

ಆದರೆ ಆ ಸ್ತ್ರೀಯು ತನ್ನಲ್ಲಿ ಆದದ್ದನ್ನು ತಿಳುಕೊಂಡು ಭಯದಿಂದ ನಡುಗುತ್ತಾ ಬಂದು ಆತನ ಮುಂದೆ ಅಡ್ಡಬಿದ್ದು ಸತ್ಯವನ್ನೆಲ್ಲಾ ಆತನಿಗೆ ತಿಳಿಸಿದಳು.

ಸಂದರ್ಭದೊಂದಿಗೆ ಓದಿ · ಮಾರ್ಕನು 5

31ಆತನ ಶಿಷ್ಯರು ಆತನಿಗೆ --ಜನಸಮೂಹವು ನಿನ್ನನ್ನು ನೂಕುವದನ್ನು ನೋಡಿ ಯೂ--ನನ್ನನ್ನು ಯಾರು ಮುಟ್ಟಿದರೆಂದು ನೀನು ಹೇಳುತ್ತೀಯಲ್ಲಾ ಅಂದರು.

32ಆದರೆ ಆತನು ಇದನ್ನು ಮಾಡಿದವಳನ್ನು ಕಾಣಬೇಕೆಂದು ಸುತ್ತಲೂ ನೋಡಿದನು.

33ಆದರೆ ಆ ಸ್ತ್ರೀಯು ತನ್ನಲ್ಲಿ ಆದದ್ದನ್ನು ತಿಳುಕೊಂಡು ಭಯದಿಂದ ನಡುಗುತ್ತಾ ಬಂದು ಆತನ ಮುಂದೆ ಅಡ್ಡಬಿದ್ದು ಸತ್ಯವನ್ನೆಲ್ಲಾ ಆತನಿಗೆ ತಿಳಿಸಿದಳು.

34ಆಗ ಆತನು ಆಕೆಗೆ--ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥ ಮಾಡಿತು; ಸಮಾಧಾನದಿಂದ ಹೋಗು; ನಿನ್ನ ಜಾಡ್ಯದಿಂದ ನೀನು ಸ್ವಸ್ಥಳಾಗು ಅಂದನು.

35ಆತನು ಇನ್ನೂ ಮಾತನಾಡುತ್ತಿರುವಾಗ ಸಭಾ ಮಂದಿರದ ಅಧಿಕಾರಿಯ ಮನೆಯಿಂದ ಕೆಲವರು ಅಲ್ಲಿಗೆ ಬಂದು--ನಿನ್ನ ಮಗಳು ಸತ್ತಿದ್ದಾಳೆ; ಬೋಧಕ ನಿಗೆ ಇನ್ನು ನೀನು ತೊಂದರೆಪಡಿಸುವದು ಯಾಕೆ? ಅಂದರು.

ಮಾರ್ಕನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी