೨ ಪೂರ್ವಕಾಲವೃತ್ತಾಂತ 19:10

ಇದಲ್ಲದೆ ರಕ್ತ ರಕ್ತಕ್ಕೂ ನ್ಯಾಯಕ್ಕೂ ಆಜ್ಞೆಗೂ ನಿಯಮಗಳಿಗೂ ನ್ಯಾಯ ತೀರ್ವಿಕೆಗಳಿಗೂ ತಮ್ಮ ಪಟ್ಟಣಗಳಲ್ಲಿ ವಾಸವಾಗಿರುವ ನಿಮ್ಮ ಸಹೋದರರಿಂದ ಯಾವ ಕಾರ್ಯವಾದರೂ ನಿಮ್ಮ ಮುಂದೆ ಬಂದರೆ ರೌದ್ರವು ನಿಮ್ಮ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ಬಾರದ ಹಾಗೆ ಕರ್ತನಿಗೆ ವಿರೋಧವಾಗಿ ಅಪರಾಧಮಾಡದಂತೆ ನೀವು ಅವರನ್ನು ಎಚ್ಚರಿಸಬೇಕು. ಇದನ್ನು ಮಾಡಿರಿ, ಆಗ ನೀವು ಅಪರಾಧವಿಲ್ಲದವರಾಗಿರುವಿರಿ.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 19

8ಇದಲ್ಲದೆ ಅವರು ಯೆರೂಸಲೇಮಿಗೆ ತಿರಿಗಿ ಬಂದ ತರುವಾಯ ಯೆಹೋಷಾಫಾಟನು ಕರ್ತನ ನ್ಯಾಯತೀರ್ವಿಕೆಗೋಸ್ಕರವೂ ವ್ಯಾಜ್ಯಗಳಿಗೋ ಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ ಯಾಜಕರಲ್ಲಿಯೂ ಪಿತೃಗಳ ಮುಖ್ಯಸ್ಥರಲ್ಲಿಯೂ ಕೆಲ ವರನ್ನು ನೇಮಿಸಿ ಅವರಿಗೆ--

9ನೀವು ಈ ಕಾರ್ಯವನ್ನು ಕರ್ತನ ಭಯದಿಂದಲೂ ನಂಬಿಕೆಯಿಂದಲೂ ಪೂರ್ಣ ಹೃದಯದಿಂದಲೂ ಮಾಡಬೇಕು.

10ಇದಲ್ಲದೆ ರಕ್ತ ರಕ್ತಕ್ಕೂ ನ್ಯಾಯಕ್ಕೂ ಆಜ್ಞೆಗೂ ನಿಯಮಗಳಿಗೂ ನ್ಯಾಯ ತೀರ್ವಿಕೆಗಳಿಗೂ ತಮ್ಮ ಪಟ್ಟಣಗಳಲ್ಲಿ ವಾಸವಾಗಿರುವ ನಿಮ್ಮ ಸಹೋದರರಿಂದ ಯಾವ ಕಾರ್ಯವಾದರೂ ನಿಮ್ಮ ಮುಂದೆ ಬಂದರೆ ರೌದ್ರವು ನಿಮ್ಮ ಮೇಲೆಯೂ ನಿಮ್ಮ ಸಹೋದರರ ಮೇಲೆಯೂ ಬಾರದ ಹಾಗೆ ಕರ್ತನಿಗೆ ವಿರೋಧವಾಗಿ ಅಪರಾಧಮಾಡದಂತೆ ನೀವು ಅವರನ್ನು ಎಚ್ಚರಿಸಬೇಕು. ಇದನ್ನು ಮಾಡಿರಿ, ಆಗ ನೀವು ಅಪರಾಧವಿಲ್ಲದವರಾಗಿರುವಿರಿ.

11ಇಗೋ, ಪ್ರಧಾನ ಯಾಜಕನಾದ ಅಮರ್ಯನು ಕರ್ತನ ಸಮಸ್ತ ಕಾರ್ಯಗಳಲ್ಲಿಯೂ ಯೆಹೂದದ ಮನೆಯ ನಾಯಕ ನಾಗಿರುವ ಇಷ್ಮಾಯೇಲನ ಮಗನಾದ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇದ್ದಾರೆ. ಇದ ಲ್ಲದೆ ಲೇವಿಯರೂ ನಿಮ್ಮ ಮುಂದೆ ಅಧಿಕಾರಿಗಳಾಗಿ ರುವರು. ನೀವು ಬಲಗೊಂಡು ಕೆಲಸ ನಡಿಸಿರಿ; ಕರ್ತನು ಒಳ್ಳೆಯವರ ಸಂಗಡ ಇರುವನು ಅಂದನು.

೨ ಪೂರ್ವಕಾಲವೃತ್ತಾಂತ 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी