ಮಹೋನ್ನತ ಪರ್ವತದಲ್ಲಿ ನೀನು ಹಾಸಿಗೆಯನ್ನು ಹಾಕಿಕೊಂಡಿದ್ದೀ. ಬಲಿ ಅರ್ಪಿಸುವ ದಕ್ಕೂ ಅಲ್ಲಿಗೆ ಏರಿದ್ದೀ.
5ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿ ಕೊಂಡು ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ ಸುಳ್ಳಿನ ಸಂತತಿಯೂ ಅಲ್ಲವೋ?
6ಹಳ್ಳದ ನುಣುಪಾದ ಕಲ್ಲುಗಳು ನಿನ್ನ ಪಾಲು, ಅವುಗಳೇ ಹೌದು, ಅವೇ ನಿನ್ನ ಪಾಲು, ಅವುಗಳಿಗೆ ನೀನು ಪಾನದ್ರವ್ಯವನ್ನು ಮತ್ತು ಆಹಾರದರ್ಪಣೆಯನ್ನು ಅರ್ಪಿಸಿದ್ದೀ, ಇವುಗಳಿಂದ ನಾನು ಆದರಣೆ ಹೊಂದ ಬೇಕೋ?
7ಮಹೋನ್ನತ ಪರ್ವತದಲ್ಲಿ ನೀನು ಹಾಸಿಗೆಯನ್ನು ಹಾಕಿಕೊಂಡಿದ್ದೀ. ಬಲಿ ಅರ್ಪಿಸುವ ದಕ್ಕೂ ಅಲ್ಲಿಗೆ ಏರಿದ್ದೀ.
8ಕದಗಳ ಮತ್ತು ನಿಲುವಿನ ಹಿಂಭಾಗದಲ್ಲಿ ನಿನ್ನ ಜ್ಞಾಪಕ ಚಿಹ್ನೆಯನ್ನು ಇಟ್ಟಿದ್ದೀ. ನನ್ನನ್ನು ಬಿಟ್ಟು ಬೇರೊಬ್ಬನಿಗೆ ನಿನ್ನನ್ನು ತೋರ್ಪಡಿಸಿ ಕೊಂಡಿದ್ದೀ; ಏರಿಹೋಗಿ ನಿನ್ನ ಮಂಚವನ್ನು ಅಗಲ ಮಾಡಿಕೊಂಡು ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದೀ; ಅವರ ಮಂಚವನ್ನು ಕಂಡಲ್ಲಿ ಅದನ್ನು ಪ್ರೀತಿಮಾಡಿದ್ದೀ.
9ಬಹು ಸುಗಂಧ ದ್ರವ್ಯಗಳನ್ನು ಕೂಡಿಸಿ, ತೈಲದೊಂದಿಗೆ ರಾಜನ ಬಳಿಗೆ ಹೋಗಿದ್ದೀ, ದೂರಕ್ಕೆ ನಿನ್ನ ಸೇವಕರನ್ನು ಕಳುಹಿಸಿದ್ದೀ, ಪಾತಾಳ ದಷ್ಟು ನೀಚಸ್ಥಿತಿಗೆ ಇಳಿದಿದ್ದೀ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ