ನ್ಯಾಯಸ್ಥಾಪಕರು 4:17

ಆದರೆ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರಕ್ಕೆ ಓಡಿಬಂದನು. ಯಾಬೀನನೆಂಬ ಹಾಚೋರಿನ ಅರಸ ನಿಗೂ ಕೇನ್ಯನಾದ ಹೆಬೆರನ ಮನೆಗೂ ನಡುವೆ ಸಮಾ ಧಾನ ಇತ್ತು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 4

15ಕರ್ತನು ಸೀಸೆರನನ್ನೂ ಅವನ ಎಲ್ಲಾ ರಥಗಳನ್ನೂ ಎಲ್ಲಾ ಸೈನ್ಯವನ್ನೂ ಬಾರಾಕನ ಮುಂದೆ ಕತ್ತಿಯಿಂದ ಚದರಿಸಿದನು.

16ಆಗ ಸೀಸೆರನು ರಥವನ್ನು ಬಿಟ್ಟು ಇಳಿದು ಕಾಲು ನಡೆಯಾಗಿ ಓಡಿ ಹೋದನು. ಆದರೆ ಬಾರಾಕನು ರಥಗಳನ್ನೂ ಸೈನ್ಯ ವನ್ನೂ ಅನ್ಯಜನಾಂಗಗಳ ಹರೋಷೆತಿನ ಮಟ್ಟಿಗೂ ಹಿಂದಟ್ಟಿದನು. ಸೀಸೆರನ ಸೈನ್ಯವೆಲ್ಲಾ ಕತ್ತಿಯಿಂದ ಹತ ವಾಗಿ ಬಿತ್ತು; ಒಬ್ಬನಾದರೂ ಉಳಿಯಲಿಲ್ಲ.

17ಆದರೆ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರಕ್ಕೆ ಓಡಿಬಂದನು. ಯಾಬೀನನೆಂಬ ಹಾಚೋರಿನ ಅರಸ ನಿಗೂ ಕೇನ್ಯನಾದ ಹೆಬೆರನ ಮನೆಗೂ ನಡುವೆ ಸಮಾ ಧಾನ ಇತ್ತು.

18ಆಗ ಯಾಯೇಲಳು ಸೀಸೆರನನ್ನು ಎದುರುಗೊಳ್ಳುವದಕ್ಕೆ ಹೋಗಿ ಅವನಿಗೆ--ಒಳಗೆ ಬಾ, ನನ್ನ ಪ್ರಭುವೇ; ನನ್ನ ಬಳಿಗೆ ಬಾ; ಭಯಪಡಬೇಡ ಎಂದು ಹೇಳಿದಳು. ಅವನು ಗುಡಾರದಲ್ಲಿರುವ ಅವಳ ಬಳಿಗೆ ಬಂದಾಗ ಅವಳು ಅವನನ್ನು ಒಂದು ಜಮಖಾನ ದಿಂದ ಮುಚ್ಚಿದಳು.

19ಸೀಸೆರನು ಅವಳಿಗೆ--ದಯ ವಿಟ್ಟು ನನಗೆ ಕುಡಿಯುವದಕ್ಕೆ ಸ್ವಲ್ಪ ನೀರು ಕೊಡು, ನನಗೆ ದಾಹವಾಗಿದೆ ಅಂದನು. ಅವಳು ಹಾಲಿನ ಬುದ್ದಲಿಯನ್ನು ತೆರೆದು ಅವನಿಗೆ ಕುಡಿಯಲು ಕೊಟ್ಟು ಅವನನ್ನು ಮುಚ್ಚಿದಳು.

ನ್ಯಾಯಸ್ಥಾಪಕರು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी