ಅಪೊಸ್ತಲರ ಕೃತ್ಯಗಳು 23:10

ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 23

8ಪುನರುತ್ಥಾನವಾಗಲೀ ದೂತನಾ ಗಲೀ ಆತ್ಮನಾಗಲೀ ಇಲ್ಲವೆಂದು ಸದ್ದುಕಾಯರು ಹೇಳುತ್ತಾರೆ; ಇವೆಲ್ಲವುಗಳು ಇವೆಯೆಂದು ಫರಿಸಾ ಯರು ಒಪ್ಪಿಕೊಳ್ಳುತ್ತಾರೆ.

9ಅಲ್ಲಿ ದೊಡ್ಡ ಕೂಗಾಟ ಉಂಟಾದದ್ದರಿಂದ ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳು ಎದ್ದು--ಈ ಮನುಷ್ಯನಲ್ಲಿ ಯಾವ ಕೆಟ್ಟ ದ್ದನ್ನೂ ನಾವು ಕಾಣಲಿಲ್ಲ; ಆತ್ಮವಾಗಲೀ ದೇವದೂತ ನಾಗಲೀ ಅವನ ಕೂಡ ಮಾತನಾಡಿದರೆ ನಾವು ದೇವರಿಗೆ ವಿರೋಧವಾಗಿ ವ್ಯಾಜ್ಯವಾಡದೆ ಇರೋಣ ಎಂದು ಹೇಳಿ ವಾಗ್ವಾದ ಮಾಡಿದರು.

10ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು.

11ಮರುದಿನ ರಾತ್ರಿ ಕರ್ತನು ಅವನ ಬಳಿಯಲ್ಲಿ ನಿಂತು--ಪೌಲನೇ, ಧೈರ್ಯವಾಗಿರು; ಯೆರೂಸ ಲೇಮಿನಲ್ಲಿ ನನ್ನ ವಿಷಯವಾಗಿ ನೀನು ಸಾಕ್ಷಿ ಹೇಳಿ ದಂತೆ ರೋಮ್‌ನಲ್ಲಿಯೂ ಸಾಕ್ಷಿ ಹೇಳತಕ್ಕದ್ದು ಎಂದು ಹೇಳಿದನು.

12ಬೆಳಗಾದ ಮೇಲೆ ಯೆಹೂದ್ಯರಲ್ಲಿ ಕೆಲವರು ಒಗ್ಗಟ್ಟಾಗಿ ಕೂಡಿ ತಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನಗಳನ್ನು ತೆಗೆದುಕೊಳ್ಳುವದಿಲ್ಲವೆಂದು ಹೇಳಿ ಶಪಥಮಾಡಿಕೊಂಡರು.

ಅಪೊಸ್ತಲರ ಕೃತ್ಯಗಳು 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी