೨ ಸಮುವೇಲನು 7:24

ಇಸ್ರಾ ಯೇಲ್‌ ಜನವನ್ನು ಸದಾಕಾಲಕ್ಕೂ ನಿನ್ನ ಜನರಾಗಿ ರುವ ಹಾಗೆ ನಿನಗೆ ಸ್ಥಿರಪಡಿಸಿಕೊಂಡಿದ್ದೀ; ಕರ್ತ ನಾದ ನೀನು ಅವರಿಗೆ ದೇವರಾಗಿದ್ದೀ.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 7

22ಆದದರಿಂದ ಓ ಕರ್ತನಾದ ದೇವರೇ, ನೀನು ಮಹತ್ವವುಳ್ಳವನಾಗಿದ್ದೀ; ನಾವು ನಮ್ಮ ಕಿವಿಗಳಿಂದ ಕೇಳಿದ ಎಲ್ಲಾದರ ಪ್ರಕಾರ ನಿನ್ನ ಹಾಗೆ ಯಾರೂ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ.

23ಭೂಲೋಕದಲ್ಲಿ ನಿನ್ನ ಜನರಾದ ಇಸ್ರಾಯೇಲ್ಯರಿಗೆ ಸಮಾನವಾದ ಜನಾಂಗ ಯಾವದು? ಅವರನ್ನು ಸ್ವಜನರಾಗಿ ವಿಮೋಚಿಸು ವಂತೆಯೂ ತನಗೆ ಹೆಸರನ್ನು ಪಡಕೊಳ್ಳುವಂತೆಯೂ ದೇವರು ಹೋದನು; ಅವರಿಗೋಸ್ಕರ ನಿನ್ನ ದೇಶಕ್ಕೆ, ಐಗುಪ್ತದಿಂದ ಜನಾಂಗಗಳಿಂದಲೂ ಅವರ ದೇವರು ಗಳಿಂದಲೂ ವಿಮೋಚಿಸಿದ ನಿನ್ನ ಜನರ ಮುಂದೆ ಈ ಮಹಾಭಯಂಕರವಾದ ಕಾರ್ಯಗಳನ್ನು ಮಾಡು ವದಕ್ಕಾಗಿಯೇ ದೇವರು ಹೋದನು.

24ಇಸ್ರಾ ಯೇಲ್‌ ಜನವನ್ನು ಸದಾಕಾಲಕ್ಕೂ ನಿನ್ನ ಜನರಾಗಿ ರುವ ಹಾಗೆ ನಿನಗೆ ಸ್ಥಿರಪಡಿಸಿಕೊಂಡಿದ್ದೀ; ಕರ್ತ ನಾದ ನೀನು ಅವರಿಗೆ ದೇವರಾಗಿದ್ದೀ.

25ಈಗ ಓ ಕರ್ತನಾದ ದೇವರೇ, ನೀನು ನಿನ್ನ ದಾಸನನ್ನು ಕುರಿತೂ ಅವನ ಮನೆಯನ್ನು ಕುರಿತೂ ಹೇಳಿದ ವಾಕ್ಯವನ್ನು ಶಾಶ್ವತಕ್ಕೂ ಸ್ಥಿರಪಡಿಸಿ ನೀನು ಹೇಳಿದ ಹಾಗೆಯೇ ಮಾಡು.

26ಸೈನ್ಯಗಳ ಕರ್ತನು ಇಸ್ರಾಯೇಲಿನ ಮೇಲೆ ದೇವರಾಗಿದ್ದಾನೆಂದು ಸದಾಕಾಲಕ್ಕೂ ನಿನ್ನ ನಾಮವು ಘನಹೊಂದಲಿ. ಇದಲ್ಲದೆ ನಿನ್ನ ದಾಸನಾದ ದಾವೀ ದನ ಮನೆಯು ನಿನ್ನ ಮುಂದೆ ಸ್ಥಿರವಾಗಿರಲಿ.

೨ ಸಮುವೇಲನು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी