ಯೆರೆಮಿಯ 15:6

ನೀನು ನನ್ನನ್ನು ಬಿಟ್ಟು ಬಿಟ್ಟಿದ್ದೀ ಎಂದು ಕರ್ತನು ಅನ್ನುತ್ತಾನೆ; ನೀನು ಹಿಂಜರಿ ದಿದ್ದೀ, ಆದದರಿಂದ ನನ್ನ ಕೈಯನ್ನು ನಿನಗೆ ವಿರೋಧ ವಾಗಿ ಚಾಚಿ ನಿನ್ನನ್ನು ನಾಶಮಾಡುವೆನು. ಪಶ್ಚಾತ್ತಾಪ ಪಡುವದರಲ್ಲಿ ದಣಿದಿದ್ದೇನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 15

4ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯ ನಿಮಿತ್ತವೂ ಇವನು ಯೆರೂಸಲೇಮಿನಲ್ಲಿ ಮಾಡಿದ್ದರ ನಿಮಿತ್ತವೂ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿಹೋಗುವಂತೆ ಮಾಡುವೆನು.

5ಓ ಯೆರೂಸಲೇಮೇ, ನಿನ್ನ ಮೇಲೆ ಯಾರೂ ಕನಿಕರಪಡುವರು? ನಿನಗೋಸ್ಕರ ಯಾರು ದುಃಖಿಸುವರು? ನಿನ್ನ ಕ್ಷೇಮವನ್ನು ಕುರಿತು ಕೇಳುವದಕ್ಕೆ ಯಾರು ಸವಿಾಪ ಬರುವರು?

6ನೀನು ನನ್ನನ್ನು ಬಿಟ್ಟು ಬಿಟ್ಟಿದ್ದೀ ಎಂದು ಕರ್ತನು ಅನ್ನುತ್ತಾನೆ; ನೀನು ಹಿಂಜರಿ ದಿದ್ದೀ, ಆದದರಿಂದ ನನ್ನ ಕೈಯನ್ನು ನಿನಗೆ ವಿರೋಧ ವಾಗಿ ಚಾಚಿ ನಿನ್ನನ್ನು ನಾಶಮಾಡುವೆನು. ಪಶ್ಚಾತ್ತಾಪ ಪಡುವದರಲ್ಲಿ ದಣಿದಿದ್ದೇನೆ.

7ಅವರನ್ನು ಮೊರದಿಂದ ದೇಶದ ಬಾಗಿಲುಗಳಲ್ಲಿ ತೂರುವೆನು; ನನ್ನ ಜನರನ್ನು ಮಕ್ಕಳಿಲ್ಲದವರಾಗ ಮಾಡಿ ನಾಶಮಾಡುವೆನು. ಅವರು ತಮ್ಮ ಮಾರ್ಗಗಳನ್ನು ಬಿಟ್ಟು ಹಿಂತಿರುಗದೆ ಇದ್ದದರಿಂದ

8ಅವರ ವಿಧವೆಗಳು ಸಮುದ್ರದ ಮರಳಿಗಿಂತ ನನಗೆ ಹೆಚ್ಚಾದರು. ನಾನು ಅವರ ಬಳಿಗೆ ಪ್ರಾಯದವರ ತಾಯಿಯ ಮೇಲೆ ಮಧ್ಯಾಹ್ನದಲ್ಲಿ ನಾಶನ ಮಾಡು ವವನನ್ನು ತರಿಸಿದ್ದೇನೆ; ಪಕ್ಕನೆ ಅವನು ಅವಳ ಮೇಲೆ ಬೀಳುವಂತೆ ಮಾಡುವೆನು, ಹೆದರಿಕೆಯನ್ನು ಪಟ್ಟಣದ ಮೇಲೆ ಬೀಳಮಾಡಿದ್ದೇನೆ.

ಯೆರೆಮಿಯ 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी