ಓ ಕರ್ತನೇ, ನಾನು ಕೂಗುವ ಸ್ವರವನ್ನು ಕೇಳು; ನನ್ನನ್ನು ಕರುಣಿಸಿ ನನಗೆ ಉತ್ತರಕೊಡು.
5ಕೇಡಿನ ಸಮಯದಲ್ಲಿ ಆತನು ತನ್ನ ಗುಡಾರದಲ್ಲಿ ನನ್ನನ್ನು ಬಚ್ಚಿಡುವನು. ತನ್ನ ಗುಪ್ತವಾದ ಡೇರೆಯಲ್ಲಿ ನನ್ನನ್ನು ಮರೆಮಾಡುವನು; ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವನು.
6ಈಗ ನನ್ನ ಸುತ್ತಲಿರುವ ಶತ್ರುಗಳ ಮೇಲೆ ನನ್ನ ತಲೆಯು ಎತ್ತಲ್ಪಟ್ಟಿರುವದು. ಆದದರಿಂದ ಆತನ ಗುಡಾರದಲ್ಲಿ ಉತ್ಸಾಹದ ಬಲಿಗಳನ್ನು ಅರ್ಪಿ ಸುವೆನು; ಹೌದು, ಕರ್ತನಿಗೆ ಹಾಡಿ ಕೀರ್ತಿಸುವೆನು.
7ಓ ಕರ್ತನೇ, ನಾನು ಕೂಗುವ ಸ್ವರವನ್ನು ಕೇಳು; ನನ್ನನ್ನು ಕರುಣಿಸಿ ನನಗೆ ಉತ್ತರಕೊಡು.
8ನೀನು--ನನ್ನ ಮುಖವನ್ನು ನೀವು ಹುಡುಕಿರಿ ಎಂದು ಹೇಳಿದಿಯಲ್ಲಾ. ಕರ್ತನೇ, ನಿನ್ನ ಮುಖವನ್ನು ಹುಡು ಕುವೆನು ಎಂದು ನನ್ನ ಹೃದಯವು ನಿನಗೆ ಹೇಳಿತು.
9ನಿನ್ನ ಮುಖವನ್ನು ನನಗೆ ಮರೆಮಾಡಬೇಡ; ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ; ನೀನು ನನಗೆ ಸಹಾಯಕನಾಗಿದ್ದೀ; ನನ್ನನ್ನು ವಿಸರ್ಜಿಸಬೇಡ; ನನ್ನ ರಕ್ಷಣೆಯ ಓ ದೇವರೇ, ನನ್ನನ್ನು ಬಿಟ್ಟುಬಿಡಬೇಡ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ