ಯಾಕೋಬನು ರಾಹೇಲಳನ್ನೂ ಲೇಯಳನ್ನೂ ಹೊಲದಲ್ಲಿದ್ದ ತನ್ನ ಮಂದೆಯ ಬಳಿಗೆ ಕರೇಕಳುಹಿಸಿ
2ಇದಲ್ಲದೆ ಯಾಕೋಬನು ಲಾಬಾನನ ಮುಖವನ್ನು ನೋಡಿದಾಗ ಅದು ತನ್ನ ಕಡೆಗೆ ಮೊದಲು ಇದ್ದಹಾಗೆ ಇರಲಿಲ್ಲ.
3ಆಗ ಕರ್ತನು ಯಾಕೋಬನಿಗೆ--ನಿನ್ನ ತಂದೆಗಳ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನ ಸಂಗಡ ಇರುವೆನು ಅಂದನು.
4ಯಾಕೋಬನು ರಾಹೇಲಳನ್ನೂ ಲೇಯಳನ್ನೂ ಹೊಲದಲ್ಲಿದ್ದ ತನ್ನ ಮಂದೆಯ ಬಳಿಗೆ ಕರೇಕಳುಹಿಸಿ
5ಅವರಿಗೆ--ನಿಮ್ಮ ತಂದೆಯ ಮುಖವು ಮೊದಲು ನನ್ನ ಕಡೆಗೆ ಇದ್ದಹಾಗೆ ಈಗ ಇಲ್ಲದಿರುವದನ್ನು ನಾನು ನೋಡುತ್ತಿದ್ದೇನೆ. ಆದರೆ ನನ್ನ ತಂದೆಯ ದೇವರು ನನ್ನ ಸಂಗಡ ಇದ್ದನು.
6ನಾನು ಪೂರ್ಣ ಬಲದಿಂದ ನಿಮ್ಮ ತಂದೆಯ ಸೇವೆಮಾಡಿದ್ದು ನಿಮಗೆ ತಿಳಿದಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ