ದಾನಿಯೇಲನು 9:19

ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 9

17ಆದದರಿಂದ ಈಗ, ಓ ನಮ್ಮ ದೇವರೇ, ಈ ನಿನ್ನ ಸೇವಕನ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆ ಯನ್ನೂ ಕೇಳಿ ಹಾಳಾದ ನಿನ್ನ ಪರಿಶುದ್ಧ ಸ್ಥಳದ ಮೇಲೆ ಕರ್ತನಿಗೋಸ್ಕರ ನಿನ್ನ ಮುಖವನ್ನು ಪ್ರಕಾಶಪಡಿಸು.

18ಓ ನನ್ನ ದೇವರೇ, ನೀನು ಕಿವಿಗೊಟ್ಟು ಕೇಳು; ಇಗೋ, ನಿನ್ನ ಕಣ್ಣುಗಳನ್ನು ತೆರೆದು ನಾವು ಹಾಳಾದ ದ್ದನ್ನೂ ನಿನ್ನ ಹೆಸರಿನಿಂದ ಕರೆಯಲ್ಪಡುವ ಪಟ್ಟಣವನ್ನೂ ನೋಡು ಯಾಕಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿನ್ನ ಮಹಾ ಕೃಪೆಗೋಸ್ಕರವೇ ನಮ್ಮ ವಿಜ್ಞಾಪನೆಗಳನ್ನು ನಿನ್ನ ಮುಂದೆ ಅರ್ಪಿಸುತ್ತೇವೆ.

19ಓ ದೇವರೇ, ನಿನ್ನ ಪಟ್ಟಣವೂ ನಿನ್ನ ಜನರೂ ನಿನ್ನ ಹೆಸರಿನಿಂದ ಕರೆಯಲ್ಪಟ್ಟ ಕಾರಣ ಓ ಕರ್ತನೇ, ತಡಮಾಡದೆ ಕಿವಿಗೊಡು, ಓ ಕರ್ತನೇ, ಕ್ಷಮಿಸು; ಓ ಕರ್ತನೇ ಲಾಲಿಸು.

20ನಾನು ಮಾತನಾಡುತ್ತಾ ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನೂ ಅರಿಕೆಮಾಡುತ್ತಾ ನನ್ನ ದೇವರ ಪರಿಶುದ್ಧ ಪರ್ವತಕ್ಕೋಸ್ಕರ ನನ್ನ ವಿಜ್ಞಾಪನೆಯನ್ನು ನನ್ನ ದೇವರಾದ ಕರ್ತನ ಮುಂದೆ ಅರ್ಪಿಸುತ್ತಾ ಇದ್ದೆನು.

21ಹೌದು, ನಾನು ಪ್ರಾರ್ಥನೆಯಲ್ಲಿ ಮಾತನಾಡುತ್ತಿ ರುವಾಗ ನಾನು ಮೊದಲಿನ ದರ್ಶನದಲ್ಲಿ ಕಂಡ ಗಬ್ರಿಯೇಲನೆಂಬ ಮನುಷ್ಯನು ಬೇಗನೆ ಹಾರಿಬಂದು ಸುಮಾರು ಸಾಯಂಕಾಲದ ಕಾಣಿಕೆಯನ್ನು ಅರ್ಪಿಸುವ ಹೊತ್ತಿನಲ್ಲಿ ನನ್ನನ್ನು ಮುಟ್ಟಿದನು.

ದಾನಿಯೇಲನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी