ಈ ಸೌಂದರ್ಯವತಿಯಾದ ಹುಡುಗಿಯು ಅರಸನನ್ನು ಆದರಿಸಿ ಅವನನ್ನು ಸೇವಿ ಸುತ್ತಾ ಇದ್ದಳು; ಆದರೆ ಅರಸನು ಅವಳನ್ನು ಅರಿಯದೆ ಇದ್ದನು.
2ಆದದರಿಂದ ಅವನ ಸೇವಕರು ಅವನಿಗೆ--ಅರಸನಾದ ನಮ್ಮ ಒಡೆಯನಿ ಗೋಸ್ಕರ ಕನ್ನಿಕೆಯನ್ನು ಹುಡುಕುವೆವು; ಅವಳು ಅರಸನ ಬಳಿಯಲ್ಲಿ ನಿಂತು ಅವನನ್ನು ಆದರಿಸಿ ಅರಸನಾದ ನಮ್ಮ ಒಡೆಯನಿಗೆ ಬೆಚ್ಚಗೆ ಆಗುವ ಹಾಗೆ ಅವನ ಮಗ್ಗುಲಲ್ಲಿ ಮಲಗಲಿ ಅಂದರು.
3ಹಾಗೆಯೇ ಅವರು ಸೌಂದರ್ಯವತಿಯಾದ ಹುಡುಗಿಗೋಸ್ಕರ ಇಸ್ರಾ ಯೇಲಿನ ಮೇರೆಗಳಲ್ಲೆಲ್ಲಾ ಹುಡುಕಿ ಶೂನೇಮ್ಳಾದ ಅಬೀಷಗ್ಳನ್ನು ಕಂಡುಕೊಂಡು ಅವಳನ್ನು ಅರಸನ ಬಳಿಗೆ ಕರತಂದರು.
4ಈ ಸೌಂದರ್ಯವತಿಯಾದ ಹುಡುಗಿಯು ಅರಸನನ್ನು ಆದರಿಸಿ ಅವನನ್ನು ಸೇವಿ ಸುತ್ತಾ ಇದ್ದಳು; ಆದರೆ ಅರಸನು ಅವಳನ್ನು ಅರಿಯದೆ ಇದ್ದನು.
5ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು--ನಾನೇ ಅರಸನಾಗಿರಬೇಕು ಅಂದುಕೊಂಡು ತನಗೋಸ್ಕರ ರಥಗಳನ್ನೂ ರಾಹುತ ರನ್ನೂ ತನ್ನ ಮುಂದೆ ಓಡುವದಕ್ಕೆ ಐವತ್ತು ಮಂದಿ ಮನುಷ್ಯರನ್ನೂ ಸಿದ್ಧಮಾಡಿದನು.
6ಅವನ ತಂದೆಯು ಎಂದಾದರೂ--ನೀನು ಯಾಕೆ ಹೀಗೆ ಮಾಡಿದಿ ಎಂದು ಹೇಳಿ ಅವನನ್ನು ಗದರಿಸಲಿಲ್ಲ. ಇದಲ್ಲದೆ ಅವನು ಬಹು ರೂಪವಂತನಾಗಿದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ