೨ ಸಮುವೇಲನು 23:17

ಅವನು--ಕರ್ತನೇ, ಇದನ್ನು ಕುಡಿಯುವದು ನನಗೆ ದೂರವಾಗಿರಲಿ. ಇದು ತಮ್ಮ ಪ್ರಾಣದಾಶೆ ಬಿಟ್ಟು ಹೋದ ಮನುಷ್ಯರ ರಕ್ತವಲ್ಲವೇ ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇವುಗಳನ್ನು ಆ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 23

15ಆಗ ದಾವೀದನು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ನನಗೆ ಕುಡಿಯಲು ಕೊಡುವ ವನಾರೆಂದು ಬಹು ಆಶೆಯಿಂದ ಹೇಳಿದನು.

16ಆಗ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿ ಯರ ದಂಡನ್ನು ಭೇದಿಸಿ ಹೊರಟು ಬೇತ್ಲೆಹೇಮಿನ ಬಾಗಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಕ್ಕೊಂಡು ಬಂದರು. ಆದರೆ ಅವನು ಅದನ್ನು ಕುಡಿಯಲ್ಲೊಲ್ಲದೆ ಕರ್ತನಿಗಾಗಿ ಹೊಯಿ ದನು.

17ಅವನು--ಕರ್ತನೇ, ಇದನ್ನು ಕುಡಿಯುವದು ನನಗೆ ದೂರವಾಗಿರಲಿ. ಇದು ತಮ್ಮ ಪ್ರಾಣದಾಶೆ ಬಿಟ್ಟು ಹೋದ ಮನುಷ್ಯರ ರಕ್ತವಲ್ಲವೇ ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇವುಗಳನ್ನು ಆ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.

18ಯೋವಾಬನ ಸಹೋದರನಾದ ಚೆರೂಯಳ ಮಗನಾಗಿರುವ ಅಬೀಷೈಯು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಈಟಿಯನ್ನು ಎತ್ತಿ ಮುನ್ನೂರು ಜನರನ್ನು ಸಂಹರಿಸಿದ್ದರಿಂದ ಮೂವ ರೊಳಗೆ ಹೆಸರುಗೊಂಡನು.

19ಈ ಮೂರು ಮಂದಿ ಯಲ್ಲಿ ಅವನು ಬಹು ಘನವುಳ್ಳವನಾಗಿದ್ದದ್ದು ಇದ ರಿಂದಲೇ. ಆದದರಿಂದ ಅವನು ಅವರಲ್ಲಿ ಪ್ರಧಾನ ನಾದನು. ಹೇಗಿದ್ದರೂ ಆ ಮೊದಲಿನ ಮೂರು ಜನಕ್ಕೆ ಅವನು ಸಮಾನನಾಗಿರಲಿಲ್ಲ.

೨ ಸಮುವೇಲನು 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी