ಯೆಶಾಯ 34:15

ದೊಡ್ಡ ಗೂಬೆಯು ಅಲ್ಲಿ ಗೂಡನ್ನು ಮಾಡಿಕೊಂಡು ಮೊಟ್ಟೆ ಯಿಟ್ಟು ಮರಿ ಮಾಡಿ ಅವುಗಳನ್ನು ತನ್ನ ನೆರಳಿನಲ್ಲಿ ಕೂಡಿಸುವದು; ಅಲ್ಲಿ ಹದ್ದುಗಳಲ್ಲಿ ಪ್ರತಿಯೊಂದು ತಮ್ಮ ಜೊತೆಜೊತೆಯಾಗಿ ಕೂಡಿಕೊಳ್ಳುವವು.

ಸಂದರ್ಭದೊಂದಿಗೆ ಓದಿ · ಯೆಶಾಯ 34

13ಅವಳ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು; ಅವಳ ಕೋಟೆಗಳಲ್ಲಿ ತುರುಚಿಯೂ ದತ್ತೂರಿಯೂ ಇರುವವು; ಅದು (ಉಷ್ಟ್ರ ಪಕ್ಷಿಗಳ) ಸರ್ಪಗಳ ನಿವಾಸವೂ ಗೂಬೆಗಳಿಗೆ ಸ್ಥಾನವೂ ಆಗುವದು.

14ಮರುಭೂಮಿಯ ಕಾಡು ಮೃಗಗಳು ಸಹ ದ್ವೀಪದ ಕಾಡುಮೃಗಗಳೊಂದಿಗೆ ಸಂಧಿಸುವವು; ದೆವ್ವವು ತನ್ನ ಜೊತೆಯನ್ನು ಕೂಗು ವದು; ಅಲ್ಲಿ ಚೀರುಗೂಬೆಯು ಸಹ ವಿಶ್ರಮಿಸಿಕೊಂಡು ಉಪಶಮನ ಸ್ಥಳವನ್ನು ಕಂಡುಕೊಳ್ಳುವದು.

15ದೊಡ್ಡ ಗೂಬೆಯು ಅಲ್ಲಿ ಗೂಡನ್ನು ಮಾಡಿಕೊಂಡು ಮೊಟ್ಟೆ ಯಿಟ್ಟು ಮರಿ ಮಾಡಿ ಅವುಗಳನ್ನು ತನ್ನ ನೆರಳಿನಲ್ಲಿ ಕೂಡಿಸುವದು; ಅಲ್ಲಿ ಹದ್ದುಗಳಲ್ಲಿ ಪ್ರತಿಯೊಂದು ತಮ್ಮ ಜೊತೆಜೊತೆಯಾಗಿ ಕೂಡಿಕೊಳ್ಳುವವು.

16ಕರ್ತನ ಪುಸ್ತಕದಲ್ಲಿ ನೀವು ಹುಡುಕಿ ಓದಿರಿ; ಇವು ಗಳಲ್ಲಿ ಒಂದಾದರೂ ತಪ್ಪದು, ಜೊತೆಯಿಲ್ಲದೆ ಒಂದೂ ಇಲ್ಲ; ನನ್ನ ಬಾಯಿಯೇ ಅದನ್ನು ಆಜ್ಞಾಪಿ ಸಿತು; ಆತನ ಆತ್ಮವೇ ಅವುಗಳನ್ನು ಒಟ್ಟುಗೂಡಿಸಿತು

17ಆತನೇ ಅವುಗಳಿಗೋಸ್ಕರ ಚೀಟು ಹಾಕಿದ್ದಾನೆ, ಆತನ ಕೈಯೇ ಅದನ್ನು ಗೆರೆ ಎಳೆದು ಅವರಿಗೆ ಹಂಚಿ ಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿ ಕೊಳ್ಳುವವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವವು.

ಯೆಶಾಯ 34 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी