ಯೆಶಾಯ 30:25

ಮಹಾಸಂಹಾರದ ದಿವಸ ದಲ್ಲಿ ಗೋಪುರಗಳು ಬೀಳುವಾಗ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ ಪ್ರತಿಯೊಂದು ಎತ್ತರವಾದ ಗುಡ್ಡದಲ್ಲಿಯೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುತ್ತಿರುವವು.

ಸಂದರ್ಭದೊಂದಿಗೆ ಓದಿ · ಯೆಶಾಯ 30

23ಆಗ ನೀವು ಹೊಲದಲ್ಲಿ ಬೀಜ ಬಿತ್ತುವದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸು ವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರ ವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಸ್ಥಳದಲ್ಲಿ ಮೇಯುವವು.

24ಹೊಲ ಉಳುವ ಎತ್ತುಗಳು, ಪ್ರಾಯದ ಕತ್ತೆಗಳು, ಮರದಿಂದಲೂ ಕವೇ ಕೋಲಿನಿಂದಲೂ ತೂರಿದ ಮೇವನ್ನು ತಿನ್ನುವವು.

25ಮಹಾಸಂಹಾರದ ದಿವಸ ದಲ್ಲಿ ಗೋಪುರಗಳು ಬೀಳುವಾಗ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ ಪ್ರತಿಯೊಂದು ಎತ್ತರವಾದ ಗುಡ್ಡದಲ್ಲಿಯೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುತ್ತಿರುವವು.

26ಇಷ್ಟೇ ಅಲ್ಲದೆ ಕರ್ತನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ ಏಳು ದಿನಗಳ ಬೆಳಕಿ ನಂತಾಗುವದು.

27ಇಗೋ, ಕರ್ತನ ನಾಮವು ದೂರದಿಂದ ಬರು ತ್ತದೆ. ಆತನ ಕೋಪವು ಉರಿಯುತ್ತದೆ. ಅದರಿಂದೇ ಳುವ ಉರಿಯು ದಟ್ಟವಾಗಿದೆ. ಆತನ ತುಟಿಗಳು ರೋಷದಿಂದ ತುಂಬಿವೆ. ನಾಲಿಗೆಯು ದಹಿಸುವ ಅಗ್ನಿ ಯಂತಿದೆ.

ಯೆಶಾಯ 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी