ಆದಿಕಾಂಡ 44:6

ಅವನು ಅವರನ್ನು ಸಂಧಿಸಿ ಈ ಮಾತುಗಳನ್ನು ಅವರಿಗೆ ಹೇಳಿದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 44

4ಅವರು ಪಟ್ಟಣವನ್ನು ಬಿಟ್ಟು ದೂರ ಹೋಗುವದಕ್ಕಿಂತ ಮುಂಚೆ ಯೋಸೇಫನು ಮನೆಯ ಉಗ್ರಾಣಿಕನಿಗೆ--ಎದ್ದು ಆ ಮನುಷ್ಯರ ಹಿಂದೆ ಹೋಗಿ, ಅವರು ಸಿಕ್ಕಿದಾಗ--ನೀವು ಒಳ್ಳೆಯದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಯಾಕೆ ಮಾಡಿದಿರಿ?

5ಆ ಪಾತ್ರೆಯು ನನ್ನ ಒಡೆಯನು ಕುಡಿಯುವ ಪಾತ್ರೆಯಲ್ಲವೋ? ಅದರಿಂದ ನಿಜವಾ ಗಿಯೂ ಅವನು ದೈವೋಕ್ತಿಯನ್ನು ಹೇಳುವನಲ್ಲಾ? ನೀವು ಹೀಗೆ ಮಾಡಿದ್ದು ಕೆಟ್ಟದ್ದಾಗಿದೆ ಎಂದು ಅವರಿಗೆ ಹೇಳು ಅಂದನು.

6ಅವನು ಅವರನ್ನು ಸಂಧಿಸಿ ಈ ಮಾತುಗಳನ್ನು ಅವರಿಗೆ ಹೇಳಿದನು.

7ಆಗ ಅವರು ಅವನಿಗೆ--ನಮ್ಮ ಒಡೆಯನು ಯಾಕೆ ಇಂಥಾ ಮಾತುಗಳನ್ನಾಡುತ್ತಾನೆ? ಈ ಪ್ರಕಾರ ಮಾಡುವದು ನಿನ್ನ ದಾಸರಿಗೆ ದೂರವಾಗಿರಲಿ.

8ಇಗೋ, ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಿಮಗೆ ಕೊಡುವದಕ್ಕೆ ಕಾನಾನ್‌ ದೇಶದಿಂದ ತಂದೆವು. ಹೀಗಿರಲು ನಿನ್ನ ಯಜಮಾನನ ಮನೆಯೊಳಗಿಂದ ಬೆಳ್ಳಿ ಬಂಗಾರವನ್ನು ಹೇಗೆ ಕದ್ದುಕೊಂಡೇವು?

ಆದಿಕಾಂಡ 44 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी