ವಿಮೋಚನಕಾಂಡ 14:11

ಅವರು ಮೋಶೆಗೆ--ಐಗುಪ್ತದಲ್ಲಿ ಸಮಾಧಿ ಗಳು ಇಲ್ಲದ ಕಾರಣ ನಾವು ಅರಣ್ಯದಲ್ಲಿ ಸಾಯುವ ಹಾಗೆ ನಮ್ಮನ್ನು ಕರಕೊಂಡು ಬಂದಿಯೋ? ಯಾಕೆ ನೀನು ಈ ಪ್ರಕಾರ ನಮಗೆ ಮಾಡಿ ನಮ್ಮನ್ನು ಐಗುಪ್ತ ದಿಂದ ಕರಕೊಂಡು ಬಂದಿ?

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 14

9ಐಗುಪ್ತ್ಯರು ಅವರನ್ನು ಹಿಂದಟ್ಟಿದ್ದರು; ಅವರು ಸಮುದ್ರ ತೀರದಲ್ಲಿ ಇಳು ಕೊಂಡಿರುವಾಗ ಫರೋಹನ ಎಲ್ಲಾ ಕುದುರೆಗಳೂ ರಥಗಳೂ ಕುದುರೆ ಸವಾರರೂ ಅವನ ಸೈನ್ಯವೂ ಪೀಹಹೀರೋತಿನ ಸವಿಾಪದಲ್ಲಿ ಬಾಳ್ಚೆಫೋನಿನ ಎದುರಾಗಿ ಸವಿಾಪಿಸಿದರು.

10ಫರೋಹನು ಸವಿಾಪಕ್ಕೆ ಬರುತ್ತಿರಲು ಇಗೋ, ಇಸ್ರಾಯೇಲ್‌ ಮಕ್ಕಳು ತಮ್ಮ ಕಣ್ಣುಗಳನ್ನೆತ್ತಿ ಹಿಂದೆ ಬರುತ್ತಿರುವ ಐಗುಪ್ತ್ಯರನ್ನು ಕಂಡು ಇಸ್ರಾಯೇಲ್‌ ಮಕ್ಕಳು ಬಹಳವಾಗಿ ಭಯಪಟ್ಟು ಕರ್ತನಿಗೆ ಮೊರೆಯಿ ಟ್ಟರು.

11ಅವರು ಮೋಶೆಗೆ--ಐಗುಪ್ತದಲ್ಲಿ ಸಮಾಧಿ ಗಳು ಇಲ್ಲದ ಕಾರಣ ನಾವು ಅರಣ್ಯದಲ್ಲಿ ಸಾಯುವ ಹಾಗೆ ನಮ್ಮನ್ನು ಕರಕೊಂಡು ಬಂದಿಯೋ? ಯಾಕೆ ನೀನು ಈ ಪ್ರಕಾರ ನಮಗೆ ಮಾಡಿ ನಮ್ಮನ್ನು ಐಗುಪ್ತ ದಿಂದ ಕರಕೊಂಡು ಬಂದಿ?

12ನಾವು ಐಗುಪ್ತದೇಶ ದಲ್ಲಿದ್ದಾಗಲೇ--ನೀನು ನಮ್ಮ ಗೊಡವೆಗೆ ಬರಬೇಡ; ನಾವು ಐಗುಪ್ತ್ಯರಿಗೆ ಸೇವೆಮಾಡುವೆವು. ನಾವು ಅರಣ್ಯ ದಲ್ಲಿ ಸಾಯುವದಕ್ಕಿಂತ ಐಗುಪ್ತ್ಯರಿಗೆ ಸೇವೆ ಮಾಡು ವದು ಒಳ್ಳೇದಾಗಿತ್ತಲ್ಲವೇ ಎಂದು ಹೇಳಿದರು.

13ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ.

ವಿಮೋಚನಕಾಂಡ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी