ಯೆಶಾಯ 7:3

ಆಗ ಕರ್ತನು, ಯೆಶಾಯನಿಗೆ--ನೀನು ಶೆಯಾರ್‌ ಯಾಶೂಬನೆಂಬ ನಿನ್ನ ಮಗನನ್ನು ಕರೆದುಕೊಂಡು ಹೋಗಿ ಮಡಿವಾಳರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಂಡು ಅವನಿಗೆ ಹೀಗೆ ಹೇಳು--

ಸಂದರ್ಭದೊಂದಿಗೆ ಓದಿ · ಯೆಶಾಯ 7

1ಯೋಥಾಮನ ಮಗನೂ ಉಜ್ಜೀಯನ ಮೊಮ್ಮಗನೂ ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ ಇಸ್ರಾಯೇಲ್ಯರ ಅರ ಸನೂ ಆದ ಪೆಕಹ ಎಂಬವರು ಯೆರೂಸಲೇಮಿನ ವಿರುದ್ಧವಾಗಿ ಯುದ್ಧಕ್ಕೆ ಹೋದರು. ಆದರೆ ಅದನ್ನು ಜಯಿಸಲು ಸಾಧ್ಯವಾಗಲಿಲ್ಲ.

2ಸಿರಿಯಾದವರು ಎಫ್ರಾಯಾಮ್ಯರೊಂದಿಗೆ ಹೊಂದಿಕೊಂಡಿದ್ದಾರೆಂದು ದಾವೀದನ ಮನೆಗೆ ತಿಳಿದಾಗ ಅವನ ಹೃದಯವು ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು.

3ಆಗ ಕರ್ತನು, ಯೆಶಾಯನಿಗೆ--ನೀನು ಶೆಯಾರ್‌ ಯಾಶೂಬನೆಂಬ ನಿನ್ನ ಮಗನನ್ನು ಕರೆದುಕೊಂಡು ಹೋಗಿ ಮಡಿವಾಳರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಂಡು ಅವನಿಗೆ ಹೀಗೆ ಹೇಳು--

4ಜಾಗ ರೂಕನಾಗಿ ಸುಮ್ಮನಿರು; ಭಯಪಡಬೇಡ ಇಲ್ಲವೆ ರೆಚೀನ ಅರಾಮ್ಯ ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟು ಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.

5ಸಿರಿಯಾದವರೂ ಎಫ್ರಾಯಿಮಿನವರೂ ರೆಮಲ್ಯನ ಮಗನೂ ನಿನಗೆ ವಿರೋಧವಾಗಿ ದುರಾಲೋಚನೆ ಮಾಡಿ,

ಯೆಶಾಯ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी