ನನ್ನ ವೈರಿಗಳು--ನಿನ್ನ ದೇವರು ಎಲ್ಲಿ ಎಂದು ದಿನವೆಲ್ಲಾ ನನಗೆ ಹೇಳಿ ನನ್ನನ್ನು ನಿಂದಿಸಿದ್ದರಿಂದ ನನ್ನ ಎಲುಬುಗಳು ಮುರಿದಹಾಗಿವೆ.
8ಆದಾಗ್ಯೂ ಹಗಲಿನಲ್ಲಿ ಕರ್ತನು ತನ್ನ ಪ್ರೀತಿ, ಕರುಣೆಯನ್ನು ಆಜ್ಞಾಪಿಸುತ್ತಾನೆ; ರಾತ್ರಿ ಯಲ್ಲಿ ನನ್ನೊಂದಿಗೆ ಆತನ ಹಾಡೂ ನನ್ನ ಜೀವಾ ಧಾರಕನಾದ ದೇವರಿಗೆ ಪ್ರಾರ್ಥಿಸುವೆನು.
9ದೇವರೇ, ಯಾಕೆ ನನ್ನನ್ನು ಮರೆತುಬಿಟ್ಟಿದ್ದೀ? ಯಾಕೆ ನಾನು ಶತ್ರುವಿನ ಬಾಧೆಯಲ್ಲಿ ಇದ್ದು ದುಃಖದಲ್ಲಿ ನಡೆದು ಕೊಳ್ಳಬೇಕೆಂದು ನನ್ನ ಬಂಡೆಯಾದ ದೇವರಿಗೆ ನಾನು ಹೇಳುವೆನು?
10ನನ್ನ ವೈರಿಗಳು--ನಿನ್ನ ದೇವರು ಎಲ್ಲಿ ಎಂದು ದಿನವೆಲ್ಲಾ ನನಗೆ ಹೇಳಿ ನನ್ನನ್ನು ನಿಂದಿಸಿದ್ದರಿಂದ ನನ್ನ ಎಲುಬುಗಳು ಮುರಿದಹಾಗಿವೆ.
11ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ನಾನು ಇನ್ನೂ ಕೊಂಡಾಡುವೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ