೧ ಸಮುವೇಲನು 12:20

ಆಗ ಸಮು ವೇಲನು ಜನರಿಗೆ--ನೀವು ಭಯಪಡಬೇಡಿರಿ. ಈ ಕೆಟ್ಟತನವನ್ನೆಲ್ಲಾ ಮಾಡಿದ್ದೀರಿ; ಆದರೂ ಕರ್ತನನ್ನು ಬಿಟ್ಟು ತಿರುಗದೆ ನಿಮ್ಮ ಪೂರ್ಣ ಹೃದಯದಿಂದ ಕರ್ತನನ್ನು ಸೇವಿಸಿರಿ. ಲಾಭಕರವಿಲ್ಲದಂಥವುಗಳನ್ನೂ ಬಿಡಿಸಲಾರದವುಗಳನ್ನೂ ವ್ಯರ್ಥವಾದವುಗಳನ್ನೂ ಅನುಸರಿಸುವದಕ್ಕೆ ಹೋಗಬೇಡಿರಿ.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 12

18ಸಮುವೇಲನು ಕರ್ತನಿಗೆ ಮೊರೆ ಇಟ್ಟದ್ದರಿಂದ ಆ ದಿವಸದಲ್ಲೇ ಕರ್ತನು ಗುಡುಗನ್ನೂ ಮಳೆಯನ್ನೂ ಕಳುಹಿಸಿದನು. ಆಗ ಜನರೆಲ್ಲರು ಕರ್ತನಿಗೂ ಸಮು ವೇಲನಿಗೂ ಬಹಳವಾಗಿ ಭಯಪಟ್ಟರು.

19ಜನರೆಲ್ಲರು ಸಮುವೇಲನಿಗೆ--ನಾವು ಸಾಯದ ಹಾಗೆ ನಿನ್ನ ದೇವ ರಾದ ಕರ್ತನಿಗೆ ನಿನ್ನ ಸೇವಕರಿಗೋಸ್ಕರ ಪ್ರಾರ್ಥನೆ ಮಾಡು. ಯಾಕಂದರೆ ನಮಗೆ ಒಬ್ಬ ಅರಸನು ಬೇಕೆಂದು ಕೇಳಿ ನಮ್ಮ ಸಮಸ್ತ ಪಾಪಗಳಿಗೆ ಕೆಟ್ಟತನ ವನ್ನು ಕೂಡಿಸಿದೆವೆಂದು ಹೇಳಿದರು.

20ಆಗ ಸಮು ವೇಲನು ಜನರಿಗೆ--ನೀವು ಭಯಪಡಬೇಡಿರಿ. ಈ ಕೆಟ್ಟತನವನ್ನೆಲ್ಲಾ ಮಾಡಿದ್ದೀರಿ; ಆದರೂ ಕರ್ತನನ್ನು ಬಿಟ್ಟು ತಿರುಗದೆ ನಿಮ್ಮ ಪೂರ್ಣ ಹೃದಯದಿಂದ ಕರ್ತನನ್ನು ಸೇವಿಸಿರಿ. ಲಾಭಕರವಿಲ್ಲದಂಥವುಗಳನ್ನೂ ಬಿಡಿಸಲಾರದವುಗಳನ್ನೂ ವ್ಯರ್ಥವಾದವುಗಳನ್ನೂ ಅನುಸರಿಸುವದಕ್ಕೆ ಹೋಗಬೇಡಿರಿ.

21ಅವು ವ್ಯರ್ಥ ವಾದವುಗಳೇ ಸರಿ. ಯಾಕಂದರೆ ಕರ್ತನು ತನ್ನ ಮಹತ್ತಾದ ಹೆಸರಿಗೋಸ್ಕರ ತನ್ನ ಜನರನ್ನು ಕೈಬಿಡು ವದಿಲ್ಲ.

22ನಿಮ್ಮನ್ನು ತನ್ನ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾನಲ್ಲಾ! ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ ಕರ್ತನಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ.

೧ ಸಮುವೇಲನು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी