೧ ಪೂರ್ವಕಾಲವೃತ್ತಾಂತ 15:27

ದಾವೀ ದನೂ ಮಂಜೂಷವನ್ನು ಹೊರುವ ಲೇವಿಯರೂ ಹಾಡುಗಾರರೂ ಹಾಡುಗಾರರ ಸಂಗಡ ಇರುವ ಸಂಗೀತದ ಯಜಮಾನನಾದ ಕೆನನ್ಯನೂ ನಯವಾದ ನಾರಿನ ಮೇಲಂಗಿಯನ್ನು ಧರಿಸಿಕೊಂಡಿದ್ದರು. ಇದ ಲ್ಲದೆ ದಾವೀದನ ಮೇಲೆ ನಾರಿನ ಎಫೋದು ಇತ್ತು.

ಸಂದರ್ಭದೊಂದಿಗೆ ಓದಿ · ೧ ಪೂರ್ವಕಾಲವೃತ್ತಾಂತ 15

25ಹೀಗೆಯೇ ದಾವೀದನೂ ಇಸ್ರಾಯೇಲಿನ ಹಿರಿ ಯರೂ ಸಹಸ್ರಗಳ ಮೇಲೆ ಇರುವ ಅಧಿಪತಿಗಳೂ ಸಂತೋಷವಾಗಿ ಒಬೇದೆದೋಮನ ಮನೆಯೊಳಗಿಂದ ಕರ್ತನ ಒಡಂಬಡಿಕೆಯ ಮಂಜೂಷವನ್ನು ತರಲು ಹೋದರು.

26ದೇವರು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರಲು ಲೇವಿಯರಿಗೆ ಸಹಾಯ ಕೊಟ್ಟದ್ದರಿಂದ ಅವರು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಬಲಿಯಾಗಿ ಅರ್ಪಿಸಿದರು.

27ದಾವೀ ದನೂ ಮಂಜೂಷವನ್ನು ಹೊರುವ ಲೇವಿಯರೂ ಹಾಡುಗಾರರೂ ಹಾಡುಗಾರರ ಸಂಗಡ ಇರುವ ಸಂಗೀತದ ಯಜಮಾನನಾದ ಕೆನನ್ಯನೂ ನಯವಾದ ನಾರಿನ ಮೇಲಂಗಿಯನ್ನು ಧರಿಸಿಕೊಂಡಿದ್ದರು. ಇದ ಲ್ಲದೆ ದಾವೀದನ ಮೇಲೆ ನಾರಿನ ಎಫೋದು ಇತ್ತು.

28ಸಮಸ್ತ ಇಸ್ರಾಯೇಲ್ಯರು ಆರ್ಭಟದಿಂದಲೂ ಕೊಂಬಿನ ಶಬ್ದದಿಂದಲೂ ತುತೂರಿಗಳಿಂದಲೂ ತಾಳ ಗಳಿಂದಲೂ ವೀಣೆಗಳನ್ನೂ ಕಿನ್ನರಿಗಳನ್ನೂ ಬಾರಿಸು ವದರಿಂದಲೂ ಕರ್ತನ ಒಡಂಬಡಿಕೆಯ ಮಂಜೂಷ ವನ್ನು ತಂದರು.

29ಕರ್ತನ ಒಡಂಬಡಿಕೆಯ ಮಂಜೂ ಷವು ದಾವೀದನ ಪಟ್ಟಣದಲ್ಲಿ ಸೇರಿದಾಗ ಏನಾಯಿ ತಂದರೆ, ಸೌಲನ ಮಗಳಾದ ವಿಾಕಳು ಕುಣಿಯುತ್ತಾ ಆಡುತ್ತಾ ಇರುವ ಅರಸನಾದ ದಾವೀದನನ್ನು ಕಿಟಿಕಿ ಯಿಂದ ನೋಡಿ ತನ್ನ ಹೃದಯದಲ್ಲಿ ಅವನನ್ನು ಹೀನೈಸಿದಳು.

೧ ಪೂರ್ವಕಾಲವೃತ್ತಾಂತ 15 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी