ಯೆಹೆಜ್ಕೇಲನು 27:9

ಗೆಬಲಿನ ಹಿರಿಯರೂ ಅದರ ಜ್ಞಾನಿಗಳೂ ನಿನ್ನ ಬಿರುಕುಗಳನ್ನು ಮುಚ್ಚುವವರಾಗಿ ನಿನ್ನಲ್ಲಿದ್ದಾರೆ. ಸಮುದ್ರದ ಸಕಲ ನಾವೆಗಳೂ ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು ನಿನಗೆ ಸರಕುಗಳನ್ನು ತಂದೊಪ್ಪಿಸು ತ್ತಿದ್ದವು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 27

7ನಿನ್ನ ಹಾಯಿಯು ನಿನಗೆ ಧ್ವಜವು ಆಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರುಬಟ್ಟೆಯಿಂದ ಮಾಡಿ ದ್ದಾರೆ. ಎಲೀಷದ ದ್ವೀಪಗಳಿಂದ ತಂದ ನೀಲಿಯೂ ನೇರಳೆ ಬಣ್ಣವೂ ನಿನಗೆ ಮುಚ್ಚಳವಾಯಿತು.

8ಚೀದೋ ನಿನ ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವ ವರಾಗಿದ್ದಾರೆ; ತೂರೇ, ನಿನ್ನಲ್ಲಿನ ವಿವೇಕಿಗಳೇ ನಿನ್ನ ನಾವಿಕರು.

9ಗೆಬಲಿನ ಹಿರಿಯರೂ ಅದರ ಜ್ಞಾನಿಗಳೂ ನಿನ್ನ ಬಿರುಕುಗಳನ್ನು ಮುಚ್ಚುವವರಾಗಿ ನಿನ್ನಲ್ಲಿದ್ದಾರೆ. ಸಮುದ್ರದ ಸಕಲ ನಾವೆಗಳೂ ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು ನಿನಗೆ ಸರಕುಗಳನ್ನು ತಂದೊಪ್ಪಿಸು ತ್ತಿದ್ದವು.

10ಪಾರಸೀಯರೂ ಲೂದ್ಯರೂ ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು; ಗುರಾಣಿ ಯನ್ನೂ ಶಿರಸ್ತ್ರಾಣವನ್ನೂ ನಿನ್ನಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು.

11ಅರ್ವಾದಿನವರು ನಿನ್ನ ದಂಡಿನ ಸಂಗಡ ನಿನ್ನ ಗೋಡೆಗಳ ಸುತ್ತಲೂ ಮೇಲೆ ಇದ್ದರು; ಗಮ್ಮಾದ್ಯರು ನಿನ್ನ ಕೊತ್ತಲುಗಳಲ್ಲಿ ಕಾವಲಾಗಿದ್ದರು. ತಮ್ಮ ಖೇಡ್ಯಗಳನ್ನು ಸುತ್ತ ಮುತ್ತಲೂ ನಿನ್ನ ಗೋಡೆಗಳ ಮೇಲೆ ನೇತುಹಾಕಿ ಇವರು ನಿನ್ನ ಸೌಂದರ್ಯವನ್ನು ಪೂರ್ತಿಗೊಳಿಸಿದರು.

ಯೆಹೆಜ್ಕೇಲನು 27 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी