ಯೆಶಾಯ 26:11

ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.

ಸಂದರ್ಭದೊಂದಿಗೆ ಓದಿ · ಯೆಶಾಯ 26

9ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಬಯಸಿದ್ದೇನೆ, ಹೌದು, ನನ್ನಲ್ಲಿ ರುವ ನನ್ನ ಆತ್ಮದೊಂದಿಗೆ ನಿನ್ನನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ; ಭೂಮಿಗೆ ನಿನ್ನ ನ್ಯಾಯತೀರ್ವಿಕೆ ಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.

10ದುಷ್ಟನಿಗೆ ಕನಿಕರ ತೋರಿಸಿದಾಗ್ಯೂ ನೀತಿಯನ್ನು ಅವನು ಕಲಿಯಲಾರನು. ಯಥಾರ್ಥವಂತನ ದೇಶದಲ್ಲಿ ಅವನು ಅನ್ಯಾ ಯವನ್ನಾಚರಿಸುವನು ಮತ್ತು ಕರ್ತನ ಮಹತ್ವವನ್ನು ಲಕ್ಷಿಸುವದಿಲ್ಲ.

11ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.

12ಕರ್ತನೇ, ನಮಗೆ ಸಮಾಧಾನ ವನ್ನು ವಿಧಿಸುವಿ. ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದೀ.

13ಓ ಕರ್ತನೇ, ನಮ್ಮ ದೇವರೇ, ನಿನ್ನ ಬದಲು ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು. ಆದರೆ ನಿನ್ನಿಂದ ಮಾತ್ರವೇ ನಿನ್ನ ನಾಮವನ್ನು ನಾವು ಜ್ಞಾಪಿಸಿ ಕೊಳ್ಳುವಂತಾಯಿತು.

ಯೆಶಾಯ 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी