ಆದಿಕಾಂಡ 14:17

ಅವನು ಕೆದೊರ್ಲಗೋಮರನನ್ನು ಅವನ ಸಂಗಡ ಇದ್ದ ಅರಸರನ್ನು ಸಂಹರಿಸಿ ಹಿಂತಿರುಗಿ ಬಂದ ಮೇಲೆ ಸೊದೋಮಿನ ಅರಸನು ಹೊರಟು ಶಾವೆ ಎಂಬ ಅರಸನ ತಗ್ಗಿನ ವರೆಗೆ ಅಬ್ರಾಮನನ್ನು ಎದುರುಗೊಳ್ಳುವದಕ್ಕಾಗಿ ಬಂದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 14

15ರಾತ್ರಿಯಲ್ಲಿ ಅವರಿಗೆ ವಿರೋಧ ವಾಗಿ ತನ್ನ ಸೇವಕರ ಸೈನ್ಯವನ್ನು ವಿಭಾಗಿಸಿ ಅವರನ್ನು ಹೊಡೆದು ದಮಸ್ಕದ ಬಲಗಡೆಯಲ್ಲಿರುವ ಹೋಬಾದ ವರೆಗೆ ಅವರನ್ನು ಸಂಹರಿಸಿ

16ಸಂಪತ್ತನ್ನೆಲ್ಲಾ ಹಿಂದಕ್ಕೆ ತೆಗೆದುಕೊಂಡು ಬಂದನು. ತನ್ನ ಸಹೋದರನಾದ ಲೋಟನನ್ನೂ ಅವನ ಸಂಪತ್ತನ್ನೂ ಸ್ತ್ರೀಯರನ್ನೂ ಜನರನ್ನೂ ಹಿಂದಕ್ಕೆ ತಕ್ಕೊಂಡು ಬಂದನು.

17ಅವನು ಕೆದೊರ್ಲಗೋಮರನನ್ನು ಅವನ ಸಂಗಡ ಇದ್ದ ಅರಸರನ್ನು ಸಂಹರಿಸಿ ಹಿಂತಿರುಗಿ ಬಂದ ಮೇಲೆ ಸೊದೋಮಿನ ಅರಸನು ಹೊರಟು ಶಾವೆ ಎಂಬ ಅರಸನ ತಗ್ಗಿನ ವರೆಗೆ ಅಬ್ರಾಮನನ್ನು ಎದುರುಗೊಳ್ಳುವದಕ್ಕಾಗಿ ಬಂದನು.

18ಸಾಲೇಮಿನ ಅರಸನಾದ ಮೆಲ್ಕೀಚೆದೇಕನು ರೊಟ್ಟಿಯನ್ನೂ ದ್ರಾಕ್ಷಾ ರಸವನ್ನೂ ತಂದನು. ಇವನು ಮಹೋನ್ನತನಾದ ದೇವರ ಯಾಜಕನು.

19ಇವನು ಅಬ್ರಾಮನನ್ನು ಆಶೀರ್ವದಿಸಿ--ಅಬ್ರಾಮನು ಆಕಾಶವನ್ನು ಭೂಮಿ ಯನ್ನು ಹೊಂದಿರುವ ಮಹೋನ್ನತನಾದ ದೇವರಿಂದ ಆಶೀರ್ವದಿಸಲ್ಪಡಲಿ.

ಆದಿಕಾಂಡ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी