ಯೆಹೆಜ್ಕೇಲನು 29:15

ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠ ರಾಜ್ಯವೆನಿ ಸಿಕೊಳ್ಳುವದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ಮೇಲೆ ತಲೆ ಎತ್ತದು; ಅದು ಜನಾಂಗಗಳ ಮೇಲೆ ದೊರೆತನ ಮಾಡಲಾಗ ದಂತೆ ಅದನ್ನು ಕ್ಷೀಣಗತಿಗೆ ತರುವೆನು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 29

13ಆದರೂ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾಲ್ವತ್ತು ವರ್ಷಗಳ ಕೊನೆಯಲ್ಲಿ ನಾನು ಐಗುಪ್ತರಲ್ಲಿ ಚದರಿರುವ ಜನಾಂಗಗಳಲ್ಲಿ ಕೂಡಿಸುವೆನು.

14ನಾನು ಐಗುಪ್ತರನ್ನು ಸೆರೆಯಿಂದ ತಿರುಗಿ ಬಿಡಿಸಿ ಅವರನ್ನು ಪತ್ರೋಸಿನ ದೇಶಕ್ಕೆ ಅಂದರೆ ಅವರ ಜನ್ಮದೇಶಕ್ಕೆ ಮತ್ತೆ ಬರಮಾಡು ವೆನು; ಅಲ್ಲಿ ಅವರು ಕನಿಷ್ಠ ರಾಜ್ಯದವರಾಗಿರುವರು.

15ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠ ರಾಜ್ಯವೆನಿ ಸಿಕೊಳ್ಳುವದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ಮೇಲೆ ತಲೆ ಎತ್ತದು; ಅದು ಜನಾಂಗಗಳ ಮೇಲೆ ದೊರೆತನ ಮಾಡಲಾಗ ದಂತೆ ಅದನ್ನು ಕ್ಷೀಣಗತಿಗೆ ತರುವೆನು.

16ಇನ್ನು ಅದು ಇಸ್ರಾಯೇಲ್‌ ವಂಶದವರ ಭರವಸವಾಗದೆ, ಇವರು ಅವರ ಕಡೆಗೆ ನೋಡಿದಾಗ ಅಕ್ರಮವನ್ನು ಜ್ಞಾಪಕಕ್ಕೆ ತರಬೇಕಾಗಿರುವದಿಲ್ಲ; ಆಗ ನಾನೇ ದೇವ ರಾದ ಕರ್ತನೆಂದು ಅವರಿಗೆ ತಿಳಿಯುವದು.

17ಇಪ್ಪತ್ತೇಳನೇ ವರುಷದ ಮೊದಲನೇ ತಿಂಗಳಿನ, ಮೊದಲನೇ ದಿನದಲ್ಲಿ ಆದದ್ದೇನಂದರೆ ಕರ್ತನ ವಾಕ್ಯವು ನನಗೆ ಬಂದು ಹೀಗೆ ಹೇಳಿತು.

ಯೆಹೆಜ್ಕೇಲನು 29 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी