ಇಬ್ರಿಯರಿಗೆ 2:13

ನಾನು ಆತನ ಮೇಲೆ ಭರವಸವಿಡುವೆನು ಎಂತಲೂ ತಿರಿಗಿ--ಇಗೋ, ನಾನೂ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಎಂತಲೂ ಹೇಳುತ್ತಾನೆ.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 2

11ಯಾಕಂದರೆ ಪವಿತ್ರ ಮಾಡುವಾತನೂ ಪವಿತ್ರರಾದವರೆಲ್ಲರೂ ಒಬ್ಬಾತನಿಗೆ ಸಂಬಂಧಪಟ್ಟವರಾಗಿದ್ದಾರೆ. ಈ ಕಾರಣದಿಂದ ಆತನು ಅವರನ್ನು ಸಹೋದರರೆಂದು ಕರೆಯುವದಕ್ಕೆ ನಾಚಿಕೆ ಪಡದೆ--

12ನಿನ್ನ ನಾಮವನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನಗೆ ಸ್ತುತಿ ಪದಗಳನ್ನು ಹಾಡುವೆನು ಎಂತಲೂ

13ನಾನು ಆತನ ಮೇಲೆ ಭರವಸವಿಡುವೆನು ಎಂತಲೂ ತಿರಿಗಿ--ಇಗೋ, ನಾನೂ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಎಂತಲೂ ಹೇಳುತ್ತಾನೆ.

14ಇದಲ್ಲದೆ ಮಕ್ಕಳು ರಕ್ತಮಾಂಸಗಳಲ್ಲಿ ಪಾಲುಗಾರರಾದದರಿಂದ ಆತನು ಸಹ ಅವರಂತೆಯೇ ಆದನು; ತನ್ನ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ ಸೈತಾನನನ್ನು ನಾಶ ಮಾಡುವದಕ್ಕೂ

15ಮರಣ ಭಯದ ದೆಸೆಯಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವದಕ್ಕೂ ಅವರಂತೆ ರಕ್ತಮಾಂಸಗಳಲ್ಲಿ ಭಾಗ ವಹಿಸಿದನು.

ಇಬ್ರಿಯರಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी