ಅವರು ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವದು; ಆದರೆ ಅನೇಕರು ವಂಚನೆಯ ನುಡಿಗಳಿಂದ ಅವರನ್ನು ಅಂಟಿಕೊಳ್ಳು ವರು.
32ಒಡಂಬಡಿಕೆಗೆ ವಿರೋಧವಾಗಿ ಕೆಟ್ಟವರಾಗಿ ನಡೆ ಯುವವರನ್ನು ವ್ಯರ್ಥವಾದ ಮಾತುಗಳಿಂದ ಕೆಡಿ ಸುವನು; ಆದರೆ ತಮ್ಮ ದೇವರನ್ನು ಅರಿಯುವ ಜನರು ದೃಢಚಿತ್ತರಾಗಿ ಕೃತಾರ್ಥರಾಗುವರು.
33ಜನರಲ್ಲಿ ಬುದ್ಧಿವಂತರಾದವರು ಅನೇಕರಿಗೆ ಬೋಧಿಸುವರು, ಆದಾಗ್ಯೂ ಕತ್ತಿಯಿಂದಲೂ ಬೆಂಕಿಯಿಂದಲೂ ಸೆರೆ ಯಿಂದಲೂ ಕೊಳ್ಳೆಯಿಂದಲೂ ಅನೇಕ ದಿನಗಳು ಸಿಕ್ಕಿಬೀಳುವರು.
34ಅವರು ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವದು; ಆದರೆ ಅನೇಕರು ವಂಚನೆಯ ನುಡಿಗಳಿಂದ ಅವರನ್ನು ಅಂಟಿಕೊಳ್ಳು ವರು.
35ಇದಲ್ಲದೆ ಅಂತ್ಯಕಾಲದ ವರೆಗೆ ಅವರನ್ನು ಶೋಧಿಸುವದಕ್ಕೂ ಶುದ್ಧಮಾಡುವದಕ್ಕೂ ಶುಭ್ರ ಪಡಿಸುವದಕ್ಕೂ ವಿವೇಕಿಗಳಲ್ಲಿ ಕೆಲವರು ಬೀಳುವರು; ಇದು (ಅಂತ್ಯವು) ನಿಯಮಿತ ಕಾಲಕ್ಕೆ ಇರುವದು;
36ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು; ತನ್ನನ್ನು ತಾನೇ ಹೆಚ್ಚಿಸಿಕೊಂಡು ತನ್ನನ್ನು ಎಲ್ಲಾ ದೇವರುಗಳಿಗೂ ದೊಡ್ಡವನನ್ನಾಗಿ ಮಾಡಿ ಕೊಂಡು ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ ರೋಷವು ತೀರುವ ವರೆಗೂ ವೃದ್ಧಿಯಾಗಿರುವನು; ಯಾಕಂದರೆ ನಿಶ್ಚಯಿ ಸಲ್ಪಟ್ಟದ್ದು ಮಾಡಲ್ಪಡಲೇ ಬೇಕಾಗುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ