ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ--ಕರ್ತನು ಹೀಗೆ ಹೇಳುತ್ತಾನೆ--
17ಕರ್ತನು ಹೀಗೆ ಹೇಳು ತ್ತಾನೆ--ದಾವೀದನಿಗೆ ಇಸ್ರಾಯೇಲಿನ ಮನೆಯ ಸಿಂಹಾಸನದಲ್ಲಿ ಕೂತುಕೊಳ್ಳುವ ಮನುಷ್ಯನು ಇಲ್ಲದೆ ಹೋಗುವದಿಲ್ಲ.
18ಯಾಜಕರಿಗೂ ಲೇವಿಯರಿಗೂ ನಿತ್ಯವಾಗಿ ನನ್ನ ಮುಂದೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಆಹಾರದ ಅರ್ಪಣೆಗಳನ್ನು ಬೆಂಕಿಯಿಂದ ಅರ್ಪಿಸುವವದಕ್ಕೂ ಬಲಿಗಳನ್ನು ಮಾಡುವದಕ್ಕೂ ಮನುಷ್ಯನು ಇಲ್ಲದೆ ಹೋಗುವದಿಲ್ಲ.
19ಇದಲ್ಲದೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇ ನಂದರೆ--ಕರ್ತನು ಹೀಗೆ ಹೇಳುತ್ತಾನೆ--
20ಹಗಲು ರಾತ್ರಿ ತಮ್ಮ ಕಾಲದಲ್ಲಿ ಆಗದ ಹಾಗೆ ಹಗಲಿನ ಸಂಗಡ ನನ್ನ ಒಡಂಬಡಿಕೆಯನ್ನೂ ರಾತ್ರಿಯ ಸಂಗಡ ನನ್ನ ಒಡಂಬಡಿಕೆಯನ್ನೂ ವಿಾರುವದಕ್ಕೆ ನಿಮ್ಮಿಂದಾದರೆ
21ಆಗ ನಾನು ನನ್ನ ಸೇವಕನಾದ ದಾವೀದನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಅವನ ಸಿಂಹಾಸನದಲ್ಲಿ ಆಳುವ ಮಗನು ಅವನಿಗಿಲ್ಲದ ಹಾಗೆ ಮತ್ತು ನನ್ನ ಸೇವಕರಾಗಿರುವ ಯಾಜಕರಾದ ಲೇವಿಯರ ಸಂಗಡ ಮಾಡಿದ ಒಡಂಬಡಿಕೆಯನ್ನೂ ವಿಾರುವದಕ್ಕೆ ಆದೀತು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ