ಯಾಜಕಕಾಂಡ 20:15

ಒಬ್ಬನು ಪಶುವಿನೊಂದಿಗೆ ಸಂಗಮಿಸಿದರೆ ಅವನಿಗೆ ನಿಶ್ಚಯವಾಗಿ ಮರಣದಂಡನೆ ಯಾಗಬೇಕು, ನೀವು ಆ ಪಶುವನ್ನು ವಧಿಸಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 20

13ಒಬ್ಬ ಮನುಷ್ಯನು ಸ್ತ್ರೀಯೊಂದಿಗೆ ಮಲಗುವಂತೆ ಮತ್ತೊಬ್ಬ ಮನುಷ್ಯನೊಂದಿಗೆ ಮಲಗಿದರೆ ಅವರಿಬ್ಬರೂ ಅಸಹ್ಯ ವಾದದ್ದನ್ನು ಮಾಡಿದವರಾಗಿದ್ದಾರೆ; ಅವರಿಗೆ ನಿಶ್ಚಯ ವಾಗಿಯೂ ಮರಣದಂಡನೆ ವಿಧಿಸಬೇಕು; ಅವರ ರಕ್ತವು ಅವರ ಮೇಲೆ ಇರುವದು.

14ಒಬ್ಬ ಮನುಷ್ಯನು ತನಗೆ ಒಬ್ಬ ಹೆಂಡತಿಯನ್ನೂ ಅವಳ ತಾಯಿಯನ್ನೂ ತೆಗೆದುಕೊಂಡರೆ ಅದು ದುಷ್ಟತನವಾಗಿದೆ; ನಿಮ್ಮಲ್ಲಿ ದುಷ್ಟತನವು ಇರದಂತೆ ಅವನೂ ಅವರೂ ಬೆಂಕಿ ಯಿಂದ ಸುಡಲ್ಪಡಬೇಕು.

15ಒಬ್ಬನು ಪಶುವಿನೊಂದಿಗೆ ಸಂಗಮಿಸಿದರೆ ಅವನಿಗೆ ನಿಶ್ಚಯವಾಗಿ ಮರಣದಂಡನೆ ಯಾಗಬೇಕು, ನೀವು ಆ ಪಶುವನ್ನು ವಧಿಸಬೇಕು.

16ಇದಲ್ಲದೆ ಒಬ್ಬ ಸ್ತ್ರೀಯು ಒಂದು ಪಶುವಿನೊಂದಿಗೆ ಸಂಗಮಿಸುವದಕ್ಕಾಗಿ ಮಲಗಿಕೊಂಡರೆ ನೀವು ಆ ಸ್ತ್ರೀಯನ್ನೂ ಪಶುವನ್ನೂ ಕೊಲ್ಲಬೇಕು; ಅವರಿಗೆ ನಿಶ್ಚಯವಾಗಿ ಮರಣದಂಡನೆಯಾಗಬೇಕು; ಅವರ ರಕ್ತವು ಅವರ ಮೇಲೆ ಇರುವದು.

17ಒಬ್ಬನು ತನ್ನ ತಂದೆಯ ಇಲ್ಲವೆ ತನ್ನ ತಾಯಿಯ ಮಗಳಾದ ತನ್ನ ಸಹೋದರಿಯನ್ನು ತೆಗೆದುಕೊಂಡು ಅವಳ ಬೆತ್ತಲೆ ತನವನ್ನು ನೋಡಿದರೆ ಇಲ್ಲವೆ ಅವಳು ಅವನ ಬೆತ್ತಲೆತನವನ್ನು ನೋಡಿದರೆ ಅದು ದುಷ್ಟತನವೇ; ಅವರು ತಮ್ಮ ಜನರ ದೃಷ್ಟಿಯಲ್ಲಿಯೇ ತೆಗೆದು ಹಾಕಲ್ಪಡಬೇಕು; ಅವರ ರಕ್ತವು ಅವರ ಮೇಲೆ ಇರುವದು. ಅವನು ತನ್ನ ಸಹೋದರಿಯ ಬೆತ್ತಲೆತನ ವನ್ನು ಕಾಣುವಂತೆ ಮಾಡಿದ್ದರಿಂದ ತನ್ನ ಅಪರಾಧ ವನ್ನು ತಾನೇ ಹೊತ್ತುಕೊಳ್ಳುವನು.

ಯಾಜಕಕಾಂಡ 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी