ಯೋವೇಲ 3:16

ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು.

ಸಂದರ್ಭದೊಂದಿಗೆ ಓದಿ · ಯೋವೇಲ 3

14ನಿರ್ಣಯದ ತಗ್ಗಿನಲ್ಲಿ ಗುಂಪುಗಳು, ಗುಂಪುಗಳು; ಕರ್ತನ ದಿನವು ನಿರ್ಣ ಯದ ತಗ್ಗಿನಲ್ಲಿ ಸವಿಾಪವಾಗಿದೆ.

15ಸೂರ್ಯ, ಚಂದ್ರ ಕಪ್ಪಾಗುವವು; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆಮಾಡುವವು.

16ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು.

17ಹೀಗೆ ನನ್ನ ಪರಿಶುದ್ಧ ಪರ್ವತವಾದ ಚೀಯೋನಿ ನಲ್ಲಿ ವಾಸಿಸುವ ನಿಮ್ಮ ದೇವರಾದ ಕರ್ತನು ನಾನೇ ಎಂದು ನೀವು ತಿಳುಕೊಳ್ಳುವಿರಿ; ಆಗ ಯೆರೂಸಲೇಮು ಪರಿಶುದ್ಧವಾಗಿರುವದು; ಅನ್ಯರು ಇನ್ನು ಅದರಲ್ಲಿ ಹಾದುಹೋಗರು.

18ಆ ದಿನದಲ್ಲಿ ಆಗುವದೇನಂ ದರೆ, ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವವು; ಗುಡ್ಡಗಳು ಹಾಲಿನಿಂದ ಹರಿಯುವವು; ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವವು; ಕರ್ತನ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ ತಗ್ಗಿಗೆ ಜಲ ಕೊಡುವದು.

ಯೋವೇಲ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी