ಪ್ರತಿಯೊಂದಕ್ಕೂ ನಾಲ್ಕು ಮುಖಗಳು ನಾಲ್ಕು ರೆಕ್ಕೆಗಳು ಇದ್ದವು.
4ನಾನು ನೋಡಲಾಗಿ ಇಗೋ, ಉತ್ತರದಿಂದ ಸುಳಿಗಾಳಿ ಬಂದಿತು. ಒಂದು ಮಹಾ ಮೇಘವೂ ಝಗಝಗಿಸುವ ಬೆಂಕಿಯೂ ಅದರ ಸುತ್ತಲು ಪ್ರಕಾಶವೂ ಇತ್ತು; ಬೆಂಕಿಯ ಮಧ್ಯದಲ್ಲಿ ಥಳಥಳಿಸುವಂಥದ್ದು ಹೊಂಬಣ್ಣದ ಹಾಗಿತ್ತು.
5ಅದರ ಮಧ್ಯದೊಳಗಿಂದ ನಾಲ್ಕು ಜೀವಿಗಳ ರೂಪವು ಹೊರ ಟಿತು. ಅವುಗಳ ಆಕಾರವೇನಂದರೆ--ಅವುಗಳಿಗೆ ಮನುಷ್ಯನ ರೂಪವಿತ್ತು.
6ಪ್ರತಿಯೊಂದಕ್ಕೂ ನಾಲ್ಕು ಮುಖಗಳು ನಾಲ್ಕು ರೆಕ್ಕೆಗಳು ಇದ್ದವು.
7ಅವುಗಳ ಕಾಲುಗಳು ನೆಟ್ಟಗಿದ್ದವು; ಅವುಗಳ ಅಂಗಾಲು ಕರುವಿನ ಪಾದದ ಹಾಗಿದ್ದು ಹಿತ್ತಾಳೆಗೆ ಮೆರುಗು ಕೊಟ್ಟ ಬಣ್ಣದ ಹಾಗೆ ಅವು ಥಳಥಳಿಸುತ್ತಿದ್ದವು.
8ಅವುಗಳಿಗೆ ರೆಕ್ಕೆಗಳ ಕೆಳಗೆ ಅವುಗಳ ನಾಲ್ಕು ಪಕ್ಕೆಗಳ ಮೇಲೆ ಮನುಷ್ಯನ ಕೈಗಳು ಇದ್ದವು; ಮತ್ತು ಆ ನಾಲ್ಕಕ್ಕೂ ಮುಖಗಳು, ರೆಕ್ಕೆಗಳು ಇದ್ದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ