ವಿಮೋಚನಕಾಂಡ 14:17

ಇಗೋ, ನಾನು ಐಗುಪ್ತ್ಯರ ಹೃದಯವನ್ನು ಕಠಿಣಮಾಡುತ್ತೇನೆ; ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 14

15ಆಗ ಕರ್ತನು ಮೋಶೆಗೆ--ನೀನು ನನಗೆ ಯಾಕೆ ಮೊರೆಯಿಡುತ್ತೀ? ಇಸ್ರಾಯೇಲ್‌ ಮಕ್ಕಳು ಮುಂದಕ್ಕೆ ಹೋಗಬೇಕೆಂದು ಹೇಳು.

16ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು. ಆಗ ಇಸ್ರಾಯೇಲ್‌ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ಹೋಗುವರು.

17ಇಗೋ, ನಾನು ಐಗುಪ್ತ್ಯರ ಹೃದಯವನ್ನು ಕಠಿಣಮಾಡುತ್ತೇನೆ; ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು.

18ನಾನು ಫರೋ ಹನ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿ ಕೊಂಡಾಗ ನಾನೇ ಕರ್ತನೆಂದು ಐಗುಪ್ತ್ಯರು ತಿಳಿದು ಕೊಳ್ಳುವರು ಅಂದನು.

19ಆಗ ಇಸ್ರಾಯೇಲ್‌ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.

ವಿಮೋಚನಕಾಂಡ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी