ಆದರೆ ಅವನು ಶುದ್ಧನಾದ ಮೇಲೆ ಆ ಇಸಬು ಚರ್ಮದಲ್ಲಿ ಹೆಚ್ಚಾಗಿ ಹರಡಿದರೆ
33ಅವನು ಕ್ಷೌರಮಾಡಿಸಿ ಕೊಳ್ಳಲಿ, ಆದರೆ ಅವನು ಇಸಬನ್ನು ಕ್ಷೌರಮಾಡ ಬಾರದು. ಯಾಜಕನು ಆ ಇಸಬಿನವನನ್ನು ಏಳು ದಿನ ಹೆಚ್ಚಾಗಿ ಮುಚ್ಚಿಡಬೇಕು.
34ಏಳನೆಯ ದಿನದಲ್ಲಿ ಯಾಜಕನು ಆ ಇಸಬನ್ನು ನೋಡಬೇಕು. ಇಗೋ, ಆ ಇಸಬು ಚರ್ಮದಲ್ಲಿ ಹರಡದಿದ್ದರೆ ನೋಡಲು ಅದು ಚರ್ಮಕ್ಕಿಂತಲೂ ತಗ್ಗಾಗಿರದಿದ್ದರೆ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು; ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು.
35ಆದರೆ ಅವನು ಶುದ್ಧನಾದ ಮೇಲೆ ಆ ಇಸಬು ಚರ್ಮದಲ್ಲಿ ಹೆಚ್ಚಾಗಿ ಹರಡಿದರೆ
36ಯಾಜಕನು ಅವನನ್ನು ನೋಡಬೇಕು; ಇಗೋ, ಆ ಇಸಬು ಚರ್ಮ ದಲ್ಲಿ ಹರಡಿದ್ದರೆ ಯಾಜಕನು ಹಳದಿ ಕೂದಲಿಗಾಗಿ ವಿಚಾರಿಸದಿರಲಿ; ಅವನು ಅಶುದ್ಧನೇ.
37ಆದರೆ ಆ ಇಸಬು ಅವನಿಗೆ ನಿಂತ ಹಾಗೆ ಕಂಡರೆ ಅದರಲ್ಲಿ ಕಪ್ಪುಕೂದಲು ಬೆಳೆದರೆ ಇಸಬು ವಾಸಿಯಾಯಿತು ಅವನು ಶುದ್ಧನು; ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ