ಕ್ಷಣ ಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ; ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು.
5ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು.
6ನೀನು ಬಿಡಲ್ಪಟ್ಟು ಆತ್ಮದಲ್ಲಿ ವ್ಯಥೆಪಟ್ಟ ಹೆಂಗಸು, ತ್ಯಜಿಸಲ್ಪಟ್ಟವಳಾದ ಯೌವನದ ಪತ್ನಿಯ ಹಾಗೆ ಇದ್ದಾಗ ಕರ್ತನು ನಿನ್ನನ್ನು ಕರೆದಿದ್ದಾನೆ ಎಂದು ನಿನ್ನ ದೇವರು ಹೇಳುತ್ತಾನೆ.
7ಕ್ಷಣ ಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ; ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು.
8ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ.
9ಇದು ನನಗೆ ನೋಹನ ಕಾಲದ ಪ್ರಳಯ ದಂತಿದೆ; ನೋಹನ ಕಾಲದ ಪ್ರಳಯವು ಇನ್ನು ಭೂಮಿಯ ಮೇಲೆ ಹರಿಯಗೊಡಿಸುವದಿಲ್ಲವೆಂದು ನಾನು ಪ್ರಮಾಣಮಾಡಿದ ಹಾಗೆಯೇ ಇನ್ನು ನಿನ್ನ ಮೇಲೆ ಕೋಪಗೊಳ್ಳುವದಿಲ್ಲ ಇಲ್ಲವೇ ನಿನ್ನನ್ನು ಗದರಿಸುವದಿಲ್ಲ ಎಂದು ಪ್ರಮಾಣಮಾಡಿದ್ದೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ