ಧರ್ಮೋಪದೇಶಕಾಂಡ 3:12

ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್‌ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್‌ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 3

10ಬೈಲು ಸೀಮೆಯ ಎಲ್ಲಾ ಪಟ್ಟಣಗಳನ್ನೂ ಎಲ್ಲಾ ಗಿಲ್ಯಾದನ್ನೂ ಬಾಷಾನಿ ನಲ್ಲಿ ಓಗನ ರಾಜ್ಯದ ಪಟ್ಟಣಗಳಾದ ಸಲ್ಕಾ, ಎದ್ರೈ ವರೆಗೆ ಎಲ್ಲಾ ಬಾಷಾನನ್ನೂ ತಕ್ಕೊಂಡೆವು,

11ಮಹಾ ಶರೀರಗಳಲ್ಲಿ ಉಳಿದವರೊಳಗೆ ಬಾಷಾನಿನ ಅರಸ ನಾದ ಓಗನು ಮಾತ್ರ ಉಳಿದನು; ಅಗೋ, ಅವನ ಮಂಚವು ಕಬ್ಬಿಣದ ಮಂಚ; ಅದು ಅಮ್ಮೋನನ ಮಕ್ಕಳ ರಬ್ಬಾನಲ್ಲಿ ಉಂಟಲ್ಲವೋ? ಅದರ ಉದ್ದವು ಪುರುಷನ ಕೈಯಳತೆಯ ಪ್ರಕಾರ ಒಂಭತ್ತು ಮೊಳ, ಅಗಲವು ನಾಲ್ಕು ಮೊಳ ಇತ್ತು.

12ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್‌ ನದಿಯ ಸವಿಾಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು ಅರ್ಧ ಗಿಲ್ಯಾದ್‌ ಬೆಟ್ಟವನ್ನೂ ಅದರ ಪಟ್ಟಣಗಳನ್ನೂ ರೂಬೇನನ ಮನೆಯವರಿಗೂ ಗಾದನ ಮನೆಯವರಿಗೂ ಕೊಟ್ಟೆನು.

13ಮಿಕ್ಕ ಗಿಲ್ಯಾದನ್ನೂ ಓಗನ ರಾಜ್ಯವಾದ ಎಲ್ಲಾ ಬಾಷಾನನ್ನೂ ಮನಸ್ಸೆಯ ಅರ್ಧ ಕುಲಕ್ಕೆ ಕೊಟ್ಟೆನು; ಅರ್ಗೋಬಿನ ಸಮಸ್ತ ಸೀಮೆಯನ್ನೂ ಮಹಾಶರೀರಗಳ ದೇಶವೆಂದು ಹೇಳ ಲ್ಪಟ್ಟ ಸಮಸ್ತ ಭಾಷಾನನ್ನು ಅವರಿಗೆ ಕೊಟ್ಟೆನು.

14ಮನಸ್ಸೆಯ ಮಗನಾದ ಯಾಯಾರನು ಅರ್ಗೋ ಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯ ವರೆಗೆ ತಕ್ಕೊಂಡು ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನ ವರೆಗೆ ಹವ್ವೊತ್‌ ಯಾಯಾ ರೆಂದು ಹೆಸರಿಟ್ಟನು.

ಧರ್ಮೋಪದೇಶಕಾಂಡ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी