೧ ಅರಸುಗಳು 20:18

ಆಗ ಅವನು--ಅವರು ಸಮಾಧಾನಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ; ಯುದ್ಧಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ ಅಂದನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 20

16ಅವರು ಮಧ್ಯಾಹ್ನದಲ್ಲಿ ಹೊರಟರು; ಆದರೆ ಬೆನ್ಹದದನೂ ಅವನ ಸಹಾಯ ಕರಾದ ಮೂವತ್ತೆರಡು ಮಂದಿ ಅರಸುಗಳೂ ಕೂಡ ಡೇರೆಗಳಲ್ಲಿ ಅಮಲೇರುವ ಹಾಗೆ ಕುಡಿಯುತ್ತಾ ಇದ್ದರು.

17ಪ್ರಾಂತಗಳ ಪ್ರಧಾನರ ಸೇವಕರು ಮೊದಲು ಸೈನ್ಯವಾಗಿ ಹೊರಡುವಾಗ ಬೆನ್ಹದದನು ಮನುಷ್ಯರನ್ನು ಕಳುಹಿಸಿದನು. ಅವರು ತಿರಿಗಿ ಬಂದು --ಸಮಾರ್ಯದಿಂದ ಮನುಷ್ಯರು ಬಂದಿದ್ದಾರೆಂದು ಅವನಿಗೆ ತಿಳಿಸಿದರು.

18ಆಗ ಅವನು--ಅವರು ಸಮಾಧಾನಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ; ಯುದ್ಧಕ್ಕೋಸ್ಕರ ಹೊರಟು ಬಂದಿದ್ದರೆ ಅವರನ್ನು ಜೀವಿತರಾಗಿ ಹಿಡಿಯಿರಿ ಅಂದನು.

19ಪ್ರಾಂತಗಳ ಪ್ರಧಾನರ ಯೌವನಸ್ಥರೂ ಅವರ ಹಿಂದೆ ಬಂದ ಸೈನಿಕರೂ ಪಟ್ಟಣದಿಂದ ಹೊರಗೆ ಬಂದಾಗ ಪ್ರತಿ ಮನುಷ್ಯನು ತನಗೆ ಎದುರು ಬಿದ್ದವರನ್ನು ಕೊಂದುಹಾಕಿದನು.

20ಆಗ ಅರಾಮ್ಯರು ಓಡಿಹೋದರು; ಇಸ್ರಾಯೇಲ್ಯರು ಅವರನ್ನು ಹಿಂದಟ್ಟಿದರು; ಅರಾಮಿನ ಅರಸನಾದ ಬೆನ್ಹದದನು ಕುದುರೆ ಹತ್ತಿಕೊಂಡು ಕುದುರೆ ರಾಹುತರ ಸಂಗಡ ತಪ್ಪಿಸಿಕೊಂಡನು.

೧ ಅರಸುಗಳು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी